ಎಸ್ಎಸ್ಎಲ್‌ಸಿ ಫಲಿತಾಂಶ: ದಕ್ಷಿಣ ಕನ್ನಡ ಪ್ರಥಮ, ಅಭಿನಂದಿಸಿದ ಯು.ಟಿ.ಖಾದರ್

0
45

ಮಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಾಡಿನ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹಾರೈಸಿದ್ದಾರೆ.

ಅಲ್ಲದೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದಕ್ಕೆ ಸಂತಸ ವ್ಯಕ್ತಪಡಿಸುತ್ತಾ, ಇದಕ್ಕಾಗಿ ಶ್ರಮಿಸಿದ ಹತ್ತನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ, ಶಿಕ್ಷಕ-ಶಿಕ್ಷಕಿಯರಿಗೆ, ಪೋಷಕರಿಗೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಭಾಧ್ಯಕ್ಷ ಯು.ಟಿ. ಖಾದರ್ ಅಭಿನಂದನೆ ಸಲ್ಲಿಸಿದ್ದಾರೆ.

ಯು.ಟಿ.ಖಾದರ್ ಮಂಗಳೂರು ಕ್ಷೇತ್ರ ವ್ಯಾಪ್ತಿಯ ನರಿಂಗಾನ ಗ್ರಾಮದ ಪುಂಡಕೈ ನಿವಾಸಿ ಸರಸ್ವತಿ ಹಾಗೂ ಚಂದ್ರಶೇಖರ್ ದಂಪತಿ ಪುತ್ರಿ ಕುಮಾರಿ ಅಪೇಕ್ಷಾ ರಾಜ್ಯಕ್ಕೆ ಹತ್ತನೇ ರ‍್ಯಾಂಕ್ ಗಳಿಸಿದ್ದಕ್ಕೆ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ.

ಈ ಪರೀಕ್ಷೆಯಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳು ಆತಂಕ, ಹತಾಶೆಗೆ ಒಳಗಾಗುವುದು ಬೇಡ, ನಿಮ್ಮೆದುರು ಮತ್ತೆ ಪರೀಕ್ಷೆ ಬರೆಯುವ ಅವಕಾಶಗಳಿವೆ. ಮರಳಿ ಪ್ರಯತ್ನಿಸಿದರೆ ಯಶಸ್ಸು ಖಂಡಿತಾ ಸಿಗಲಿದೆ ಎಂದು ಯು.ಟಿ.ಖಾದರ್ ತಿಳಿಸಿದರು.

Previous articleಕುರಿಗಾರನ ಮಗನಿಗೆ 623 ಅಂಕ
Next articleಫೇಲಾದ ವಿದ್ಯಾರ್ಥಿಗೆ ಕೇಕ್ ತಿನ್ನಿಸಿ ಧೈರ್ಯ ಹೇಳಿದ ಪಾಲಕರು