ಬುರುಡೆ ಗ್ಯಾಂಗ್ ವಿರುದ್ಧ ಮೊದಲ ಬಾರಿ ಕಿಡಿ ನುಡಿ
ಸಂ.ಕ. ಸಮಾಚಾರ, ಮಂಗಳೂರು: ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆದಿರುವುದು ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಸಲ್ಲಿಸಿದ ಪ್ರಾಥಮಿಕ ತನಿಖೆಯ ವರದಿ ಯಿಂದ ತಿಳಿಯಪಟ್ಟಿದೆ. ಇದೇ ರೀತಿ ಷಡ್ಯಂತ್ರ ಮುಂದೆಂದೂ ಮತ್ಯಾವ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲಾಗದಂತೆ ತಡೆಯುವ ಅವಶ್ಯಕತೆಯಿದ್ದು ಸರ್ಕಾರ ಈ ವಿಚಾರವಾಗಿ ಗಮನವಹಿಸಬೇಕು.
ಈ ಷಡ್ಯಂತ್ರದ ಹಿಂದಿರುವ ಶಕ್ತಿಗಳ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಧರ್ಮಸ್ಥಳದ ಧರ್ಮಾಧಿಕಾರಿಗಳ ಕಚೇರಿ ವಕ್ತಾರರಾಗಿರುವ ಕೆ.ಪಾರ್ಶ್ವನಾಥ್ ಜೈನ್ ಒತ್ತಾಯಿಸಿದ್ದಾರೆ. ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ಎಸ್‌ಐಟಿ ನ್ಯಾಯಾಲಯಕ್ಕೆ ಪ್ರಾಥಮಿಕ ತನಿಖೆಯ ಮಾಹಿತಿ ಒದಗಿಸಿದೆ ಎಂದು ಮಾಧ್ಯಮಗಳಲ್ಲಿ ನೋಡಿ ತಿಳಿದಿದ್ದೇವೆ.
ಇದರನ್ವಯ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ರೂಪಿಸಿರುವುದು ಸ್ಪಷ್ಟವಾಗಿ ತಿಳಿದು ಬರುತ್ತದೆ. ಧಾರ್ಮಿಕ ಶ್ರದ್ಧಾಕೇಂದ್ರಗಳ ಮೇಲಿನ ಷಡ್ಯಂತ್ರಗಳು ಮೇಲಿಂದ ಮೇಲೆ ನಡೆಯುತ್ತಾ ಬಂದಿದೆ ಎನ್ನುವುದಕ್ಕೆ ಇದೂ ಕೂಡ ಒಂದು ಉದಾಹರಣೆ. ಇದೇ ರೀತಿಯ ಷಡ್ಯಂತ್ರ ಮುಂದೆಂದೂ ಮತ್ಯಾವ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲಾಗದಂತೆ ತಡೆಯುವ ಅವಶ್ಯಕತೆಯಿದ್ದು ಸರ್ಕಾರ ಈ ವಿಚಾರವಾಗಿ ಗಮನವಹಿಸಬೇಕು. ಈ ಷಡ್ಯಂತ್ರದ ಹಿಂದಿರುವ ಶಕ್ತಿಗಳಿಗೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.























