Home Advertisement
Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಮಾರ್ಚ್‌ನಲ್ಲಿ ಕಾಂಗ್ರೆಸ್ ನೂರು ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ

ಮಾರ್ಚ್‌ನಲ್ಲಿ ಕಾಂಗ್ರೆಸ್ ನೂರು ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ

0
82

ಮಂಗಳೂರು: ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷವನ್ನು ಸಂಘಟನಾತ್ಮಕವಾಗಿ ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಮಾರ್ಚ್ ತಿಂಗಳಲ್ಲಿ ನೂರು ಪಕ್ಷದ ಕಚೇರಿಗಳಿಗೆ ಶಂಕುಸ್ಥಾಪನೆ ಮಾಡುವುದಾಗಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲು ನಿರ್ದೇಶನ ನೀಡುತ್ತಿದ್ದೇನೆ. ಎಐಸಿಸಿಯಿಂದ ದಿನಾಂಕ ಬಂದರೂ ಬರದಿದ್ದರೂ ಎಲ್ಲಾ ಸಿದ್ಧತೆ ಮಾಡಿಕೊಂಡು ಪ್ರಾರಂಭ ಮಾಡುತ್ತೇನೆ,” ಎಂದು ತಿಳಿಸಿದರು.

ಇದನ್ನೂ ಓದಿ:  DK ಶಿವಕುಮಾರ್ CM ಆಗಲೆಂದು ಶಿವಗಂಗಾ ವ್ರತ: ಶಾಸಕ ಬಸವರಾಜ್ ಭರವಸೆ

ಕೆಪಿಸಿಸಿ ಅಧ್ಯಕ್ಷತ್ವದ ಆರು ವರ್ಷ – ಕಟ್ಟಡ ಕಾಮಗಾರಿ ಆರಂಭ: ಮಾರ್ಚ್ 10 ರಂದು ತಾವು ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸುತ್ತಿರುವ ಹಿನ್ನೆಲೆ ಪಕ್ಷದ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದ ಡಿಕೆಶಿ, “ಇಂದು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದೇನೆ. ಈ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸುತ್ತಿದ್ದೇವೆ,” ಎಂದು ಹೇಳಿದರು.

ಜಾತಿ–ಧರ್ಮ ರಾಜಕಾರಣದ ಆರೋಪಕ್ಕೆ ಸ್ಪಷ್ಟನೆ: ಶಿಲಾನ್ಯಾಸ ಕಾರ್ಯಕ್ರಮಕ್ಕೆ ಮುಸ್ಲಿಮರನ್ನು ಆಹ್ವಾನಿಸಿಲ್ಲ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, “ಕಾಂಗ್ರೆಸ್ ಪಕ್ಷ ಜಾತಿ ಮೇಲೆ ಅಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತದೆ. ನಮಗೆ ಎಲ್ಲಾ ಜಾತಿ ಮತ್ತು ಧರ್ಮದವರು ಬೇಕು. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಇದೇ ನಮ್ಮ ಸಿದ್ಧಾಂತ,” ಎಂದು ಸ್ಪಷ್ಟಪಡಿಸಿದರು. ಈ ರೀತಿಯ ಆರೋಪಗಳು ಕೆಲವರ ಅಸೂಯೆಯಿಂದ ಉಂಟಾಗುತ್ತವೆ ಎಂದು ಅವರು ಹೇಳಿದರು.

ಇದನ್ನೂ ಓದಿ:  ಶಾಸಕ ಸತೀಶ್ ಸೈಲ್‌ಗೆ ಲಿವರ್ ಕಸಿಗಾಗಿ ವೈದ್ಯಕೀಯ ಜಾಮೀನು ಮಂಜೂರು

ಮುಖ್ಯಮಂತ್ರಿ ವಿಚಾರ – ಹೈಕಮಾಂಡ್ ನಿರ್ಧಾರವೇ ಅಂತಿಮ: ಮುಂದಿನ ಐದು ವರ್ಷಗಳ ಕಾಲ ತಾವೇ ಮುಖ್ಯಮಂತ್ರಿ ಎಂದು ಹೈಕಮಾಂಡ್ ಸೂಚನೆ ನೀಡಿದೆ ಎಂಬ ಯತೀಂದ್ರ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, “ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕರಿಸುತ್ತೇನೆ,” ಎಂದು ಉತ್ತರಿಸಿದರು.

ಅಧಿಕಾರ ಹಂಚಿಕೆ ಬಗ್ಗೆ ಪ್ರತಿಕ್ರಿಯೆ ಇಲ್ಲ: ಶಾಸಕ ಬಸವರಾಜು ಅವರು ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿರುವ ಬಗ್ಗೆ ಪ್ರಶ್ನಿಸಿದಾಗ, “ಈ ವಿಚಾರದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಪ್ರತಿಕ್ರಿಯೆ ನೀಡಬೇಕಾದವರು ದೆಹಲಿಯವರು,” ಎಂದು ಹೇಳಿದರು.

ಇದನ್ನೂ ಓದಿ:  ಹಾಡಹಗಲೇ AAP ನಾಯಕ ಲಕ್ಕಿ ಒಬೆರಾಯ್ ಗುಂಡಿಕ್ಕಿ ಹತ್ಯೆ

ಸಂಘಟನೆ ಬಲಪಡಿಸುವತ್ತ ಕಾಂಗ್ರೆಸ್ ಗಮನ: ರಾಜ್ಯಾದ್ಯಂತ ನೂರು ಹೊಸ ಕಚೇರಿಗಳ ಸ್ಥಾಪನೆಯ ಮೂಲಕ ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸಿ, ಮುಂದಿನ ಚುನಾವಣೆಗಳಿಗೆ ಸಜ್ಜಾಗುವ ಉದ್ದೇಶವಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಡಿಕೆ ಶಿವಕುಮಾರ್ ಅವರ ಈ ಘೋಷಣೆ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ.

Previous articleತೆಪ್ಪ ಮಗುಚಿದರೂ ಪಾರಾದ ಭಕ್ತರು
Next articleMovie Review ʼರಕ್ಕಸಪುರದೋಳ್ʼ: ರಕ್ಕಸನ ಜಾಡು ಹಿಡಿದು…