SK Home Ad
Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಸಭೆಯಲ್ಲಿ ಮಾತನಾಡುತ್ತಿದ್ದಾಗಲೇ ಕುಸಿದುಬಿದ್ದು ಗ್ರಾಪಂ ಅಧ್ಯಕ್ಷ ಸಾವು

ಸಭೆಯಲ್ಲಿ ಮಾತನಾಡುತ್ತಿದ್ದಾಗಲೇ ಕುಸಿದುಬಿದ್ದು ಗ್ರಾಪಂ ಅಧ್ಯಕ್ಷ ಸಾವು

0
14

ಮಂಗಳೂರು: ಸುಳ್ಯ ಸಂಪಾಜೆ ಸಭೆಯಲ್ಲಿ ಮಾತನಾಡುತ್ತಿದ್ದಾಗ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಚೆಂಬು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಆದಂ ಕುಂಞ ಸಂಟ್ಯಾರ್ (62) ಮೃತಪಟ್ಟವರು.

ಶನಿವಾರ ಸಂಪಾಜೆಯಲ್ಲಿ ಪಯಸ್ವಿನಿ ಸಹಕಾರಿ ಬ್ಯಾಂಕ್‌ನ ಮಹಾಸಭೆ ನಡೆಯುತ್ತಿತ್ತು. ಅವರು ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿ ಕುಸಿದು ಕುಳಿತರೆನ್ನಲಾಗಿದೆ. ತಕ್ಷಣವೇ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.