ಜೈಲಿನ ಭದ್ರತೆ ಮತ್ತಷ್ಟು ಬಿಗಿ: ಆವರಣ ಗೋಡೆಗೆ ಎತ್ತರದ ತಂತಿ ಬೇಲಿ

ಮಂಗಳೂರು: ಕೊಡಿಯಾಲಬೈಲ್‌ನ ಜಿಲ್ಲಾ ಕಾರಾಗೃಹದಲ್ಲಿ ಹೊರಗಿನಿಂದ ಮೊಬೈಲ್ ಫೋನ್‌ಗಳು, ಮಾದಕ ವಸ್ತುಗಳು ಹಾಗೂ ಇತರ ನಿಷೇಧಿತ ಸಾಮಗ್ರಿಗಳನ್ನು ಎಸೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸುವ ಉದ್ದೇಶದಿಂದ ಜೈಲಿನ ಆವರಣ ಗೋಡೆಯ ಮೇಲ್ಭಾಗದಲ್ಲಿ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಸುವ ಕಾಮಗಾರಿ ಆರಂಭವಾಗಿದೆ. ಕಾರಾಗೃಹ ಇಲಾಖೆಯ ₹50 ಲಕ್ಷ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆ ಈ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಟೆಂಡರ್ ಸೇರಿದಂತೆ ವಿವಿಧ ಆಡಳಿತಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಕಳೆದ ಕೆಲ ದಿನಗಳಿಂದ ಕಾಮಗಾರಿ ಆರಂಭವಾಗಿದೆ. … Continue reading ಜೈಲಿನ ಭದ್ರತೆ ಮತ್ತಷ್ಟು ಬಿಗಿ: ಆವರಣ ಗೋಡೆಗೆ ಎತ್ತರದ ತಂತಿ ಬೇಲಿ