Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ನಾವು RSS ನಿಷೇಧಿಸಿಲ್ಲ : ಜಗದೀಶ್ ಶೆಟ್ಟರ್ ಅವರ ಅವಧಿಯಲ್ಲಿ ಹೊರಡಿಸಿದ್ದ ಆದೇಶವನ್ನೇ ನಾವೂ ಹೊರಡಿಸಿದ್ದೇವೆ

ನಾವು RSS ನಿಷೇಧಿಸಿಲ್ಲ : ಜಗದೀಶ್ ಶೆಟ್ಟರ್ ಅವರ ಅವಧಿಯಲ್ಲಿ ಹೊರಡಿಸಿದ್ದ ಆದೇಶವನ್ನೇ ನಾವೂ ಹೊರಡಿಸಿದ್ದೇವೆ

1

ಪುತ್ತೂರು: ರಾಜ್ಯ ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಪುತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆದೇಶದಲ್ಲಿ ಯಾವುದೇ ಸಂಘ ಅಥವಾ ಸಂಸ್ಥೆ ಎಂದಿದೆ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು , ನಾವು ಮಾಡಬಾರದೇ ಎಂದು ಪ್ರಶ್ನಿಸಿದರು.

2013 ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೇಶ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಮಾಡಿರುವುದು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು.

ಅನುಮತಿ ನೀಡುವುದು ಕಡ್ಡಾಯವಲ್ಲ: ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದರು.

1 COMMENT

  1. RSS ಅನ್ನು ನಿಷೇಧಿಸಲು ಆಡಳಿತ ಸರ್ಕಾರವೇ ಹಿಂಜರಿಯುವ ಪರಿಸ್ಥಿತಿಯಲ್ಲಿರುವುದು ಮುಂದಿನ ಬಹು ದೊಡ್ಡ ಅನಾಹುತಕ್ಕೆ ದಾರಿಯಾಗುವುದು. ಕುಚೇಷ್ಟೆ, ಕುಚೋಧ್ಯಗಳೇ ಆಡಳಿತ ಎಂದು ಬಿಂಭಿಸುತ್ತಿರುವ ಕೇಂದ್ರಸರ್ಕಾರದ ಬಾಹುಗಳು ಸಮಾಜದ ಉದ್ದಗಲಕ್ಕೂ ಚಾಚಿರುವುದು ಇದರಿಂದ ವ್ಯಕ್ತವಾಗುತ್ತದೆ. ಇನ್ನಾದರೂ ತನಗಿರುವ ಅಧಿಕಾರವನ್ನು ಪ್ರಸಕ್ತ ಸರ್ಕಾರ ಚಲಾಯಿಸದಿದ್ದಲ್ಲಿ ಮತ್ತೆ ಯಾರಿಂದಲೂ ಯಾವತ್ತಿಗೂ ನಿರೀಕ್ಷಿಸಲು ಸಾಧ್ಯವೇ ಇಲ್ಲ

LEAVE A REPLY

Please enter your comment!
Please enter your name here

Exit mobile version