Home Advertisement
Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಚಲಿಸುತ್ತಿದ್ದ ಬಸ್‌ನಿಂದ ಬಿದ್ದ ವಿದ್ಯಾರ್ಥಿಗಳು: ಗಂಭೀರ ಗಾಯ

ಚಲಿಸುತ್ತಿದ್ದ ಬಸ್‌ನಿಂದ ಬಿದ್ದ ವಿದ್ಯಾರ್ಥಿಗಳು: ಗಂಭೀರ ಗಾಯ

0
112

ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ ಬಾಗಿಲು ತೆರೆದು ಇಬ್ಬರು ವಿದ್ಯಾರ್ಥಿನಿಯರು ಕೆಳಗೆ ಬಿದ್ದ ಘಟನೆ – ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿತು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ಸಂಭವಿಸಿದ ಭೀಕರ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ವೇಗವಾಗಿ ಸಂಚರಿಸುತ್ತಿದ್ದ KSRTC ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.

ಘಟನೆಯ ವಿವರಗಳ ಪ್ರಕಾರ, ಪುತ್ತೂರಿನಿಂದ ಧರ್ಮಸ್ಥಳದತ್ತ ತೆರಳುತ್ತಿದ್ದ ಬಸ್ಸಿಗೆ ಗೇರುಕಟ್ಟೆ ಪ್ರದೇಶದಲ್ಲಿ ಅಕ್ಕ-ತಂಗಿಯರಾದ ಇಬ್ಬರು ವಿದ್ಯಾರ್ಥಿನಿಯರು ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆ ರಸ್ತೆ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ಬಾಗಿಲು ಏಕಾಏಕಿ ತೆರೆದಿದೆ. ಈ ವೇಳೆ ಬಾಗಿಲ ಬಳಿ ನಿಂತಿದ್ದ ಅಕ್ಕ ಮೊದಲು ಕೆಳಗೆ ಬಿದ್ದಿದ್ದು, ಅವರನ್ನು ಹಿಡಿಯಲು ಯತ್ನಿಸಿದ ತಂಗಿಯೂ ನಿಯಂತ್ರಣ ತಪ್ಪಿ ಹೊರಗೆ ಎಸೆಯಲ್ಪಟ್ಟಿದ್ದಾರೆ.

ಘಟನೆಯ ಸಂಪೂರ್ಣ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೃಶ್ಯವನ್ನು ಕಂಡ ಜನರು ಬೆಚ್ಚಿಬಿದ್ದಿದ್ದಾರೆ.

ತಕ್ಷಣ ಸ್ಥಳೀಯರು ಧಾವಿಸಿ ಇಬ್ಬರು ವಿದ್ಯಾರ್ಥಿನಿಯರನ್ನು ರಕ್ಷಿಸಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ಪ್ರಕಾರ, ಇಬ್ಬರೂ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾರೆ.

ಇಬ್ಬರು ವಿದ್ಯಾರ್ಥಿನಿಯರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು. ಈ ಘಟನೆ ಕುರಿತು KSRTC ಅಧಿಕಾರಿಗಳು ವರದಿ ಕೋರಿದ್ದಾರೆ, ಬೆಳ್ತಂಗಡಿ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ. ಬಸ್ ಡ್ರೈವ‌ರ್ ಮತ್ತು ಕಂಡಕ್ಟರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಘಟನೆ ಬಳಿಕ ಬಸ್ ನಿರ್ವಹಣೆ, ಬಾಗಿಲಿನ ಭದ್ರತೆ ಮತ್ತು ಚಾಲಕರ ಜವಾಬ್ದಾರಿತನ ಕುರಿತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.