ದಕ್ಷಿಣ ಕನ್ನಡ: ಸೌಜನ್ಯ ಪರ ಹೋರಾಟಗಾರ, ಧರ್ಮಸ್ಥಳ ಬುರುಡೆ ಷಡ್ಯಂತ್ರ ರೂಪಿಸಿದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗೀಸ್ ಅವರು ಆದೇಶ ಮಾಡಿದ್ದಾರೆ.
ತಿಮರೋಡಿ ವಿರುದ್ಧ ವಿವಿಧ ರೀತಿಯ ಸುಮಾರು 32 ಪ್ರಕರಣಗಳು ದಾಖಲಾಗಿದ್ದು, 1 ವರ್ಷದ ಮಟ್ಟಿಗೆ ಗಡಿಪಾರು ಮಾಡಲಾಗಿದೆ. ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.