ಮ್ಯಾಟ್ರಿಮೋನಿಯಲ್ಲಿ ಪರಿಚಯ: ₹87 ಲಕ್ಷ ಪಡೆದು ಯುವತಿ ನಾಪತ್ತೆ

ಬೆಳ್ತಂಗಡಿ: ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ ಯುವತಿಯೋರ್ವಳು ಬೆಳ್ತಂಗಡಿಯ ಉದ್ಯಮಿಯಿಂದ 87 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ: ಬೆಳ್ತಂಗಡಿಯ ಕೊಯ್ಯೂರು ನಿವಾಸಿ, ಉದ್ಯಮಿ ಅನನ್ಯ ಕೃಷ್ಣ (36) ಎಂಬವರಿಗೆ 2024ರ ಮೇ ತಿಂಗಳಲ್ಲಿ ಮ್ಯಾಟ್ರಿಮೋನಿ ಮೂಲಕ ಶಿವಮೊಗ್ಗ/ಬೆಂಗಳೂರು ಮೂಲದ ಅನಿಷಾ ಪಾಲನ್ನ (35) ಎಂಬ ಯುವತಿಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ಇನ್‌ಸ್ಟಾಗ್ರಾಂ ಹಾಗೂ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದು, ಮದುವೆಯಾಗುವ ಕುರಿತು ಮೊಬೈಲ್‌ನಲ್ಲಿ ಮಾತುಕತೆ ನಡೆಸುತ್ತಿದ್ದರು. … Continue reading ಮ್ಯಾಟ್ರಿಮೋನಿಯಲ್ಲಿ ಪರಿಚಯ: ₹87 ಲಕ್ಷ ಪಡೆದು ಯುವತಿ ನಾಪತ್ತೆ