SK Home Ad
Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ

ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ

0
47

ಮಂಗಳೂರು: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಸುಳ್ಯದ ಕರಿಕ್ಕಳ – ನಿಂತಿಕಲ್ ಮಧ್ಯೆಯ ಮುಚ್ಚಿಲ ಎಂಬಲ್ಲಿ ಮಂಗಳವಾರ ಸಂಭವಿಸಿದೆ.

ಎದುರಿನಿಂದ ತೆರಳುತ್ತಿದ್ದ ಕಾರು ದಿಢೀರನೆ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರಿದ್ದ ಇನ್ನೋವಾ ಕಾರು ಡಿಕ್ಕಿಯಾದ ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಶಾಸಕರ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅಪಘಾತ ಸಂಭವಿಸಿದ ವೇಳೆ ಕಾರಿನಲ್ಲಿದ್ದ ಶಾಸಕಿ ಹಾಗೂ ಚಾಲಕ ಯಾವುದೇ ಗಾಯಗಳಿಲ್ಲದೆ ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಘಟನೆಯ ಬಳಿಕ ಶಾಸಕಿ ಬೇರೊಂದು ವಾಹನದಲ್ಲಿ ತಮ್ಮ ನಿವಾಸಕ್ಕೆ ಪ್ರಯಾಣ ಬೆಳೆಸಿದರು.