ಮಂಗಳೂರು: ಮಂಗಳೂರು, ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು.
ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಗಳನ್ನು ಸ್ವಾಗತಿಸಿದರು.
ಬಳಿಕ ಪ್ರಧಾನಮಂತ್ರಿಗಳು, ವಾಯುಪಡೆ ಹೆಲಿಕಾಪ್ಟರ್‌ನಲ್ಲಿ ಉಡುಪಿಗೆ ತೆರಳಿದರು.
