ಕಾಂಗ್ರೆಸ್ ಆಹ್ವಾನ ಬಂದಿದೆ, ಸೇರ್ಪಡೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ

ಮಂಗಳೂರು: ಕಾಂಗ್ರೆಸ್ ಸೇರ್ಪಡೆ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಬಿಜೆಪಿ ಕಡೆಯಿಂದಲೂ ಕರೆಯುವ ನಿರೀಕ್ಷೆಯಲ್ಲಿದ್ದೇನೆ. ಬಿಜೆಪಿ ಆಹ್ವಾನ ನೀಡಿದರೆ ಅದರ ಬಗ್ಗೆಯೂ ಯೋಚಿಸಬಹುದು … Continue reading ಕಾಂಗ್ರೆಸ್ ಆಹ್ವಾನ ಬಂದಿದೆ, ಸೇರ್ಪಡೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ