ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

ಉಳ್ಳಾಲ (ದಕ್ಷಿಣ ಕನ್ನಡ): ರೌಡಿಶೀಟರ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಉಳ್ಳಾಲ ಸಮೀಪದ ತೊಕ್ಕೊಟ್ಟು ಫ್ಲೈಓವರ್ ಬಳಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಮೃತನನ್ನು ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (46) ಯಾನೆ “ಟ್ಯಾಬ್ಲೆಟ್ ಆರೀಫ್” ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ಆರೀಫ್, ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದರು. ಇಂದು ಬೆಳಿಗ್ಗೆ ಬುಲೆಟ್ ಬೈಕ್‌ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳ … Continue reading ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ