ಸಂ. ಕ. ಸಮಾಚಾರ, ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಶೇರ್ ಮಾಡಿರುವ ಪೋಸ್ಟ್ ಅನ್ನು ಅವರು ತೆಗೆದು ಹಾಕಿದ್ದಾರೆ. ಅವರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಸೋಮವಾರ (ನ.೩) ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದಿದ್ದಾರೆ. ಸಮಾಜದಲ್ಲಿ ದ್ವೇಷ ಭಾವನೆ ಮೂಡಿಸಬಹುದಾದ ಭಾಷಣದ ವಿಡಿಯೊ ತುಣುಕನ್ನು ಶರಣ್ ಫೇಸ್‌ಬುಕ್‌ನಲ್ಲಿ ಶೇರ್ ಮಾಡಿದ್ದರು.
ಶಾಸಕರು ಗರಂ: ಶರಣ್ ಪಂಪ್‌ವೆಲ್‌ರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಸುದ್ದಿ ಹಬ್ಬುತ್ತಿದ್ದಂತೆಯೇ ಕದ್ರಿ ಠಾಣೆಯ ಎದುರು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಜಮಾಯಿಸಿದ್ದಾರೆ. ಪಂಪ್‌ವೆಲ್ ವಶ ವಿಚಾರವಾಗಿ ಕದ್ರಿ ಪೊಲೀಸ್ ಠಾಣೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಗರಂ ಆದ ಘಟನೆಯೂ ನಡೆಯಿತು.
ಈ ವಿಷಯ ತಿಳಿದ ತಕ್ಷಣ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಕದ್ರಿ ಪೊಲೀಸ್ ಠಾಣೆಗೆ ಆಗಮಿಸಿದರು. ಶಾಸಕರು ಪ್ರಕರಣದ ಕುರಿತು ಠಾಣಾಧಿಕಾರಿಯಿಂದ ಮಾಹಿತಿ ಪಡೆಯಲು ಪ್ರಯತ್ನಿಸಿದರೂ, ಶರಣ್ ಪಂಪ್‌ವೆಲ್ ಅವರನ್ನು ವಶಕ್ಕೆ ಪಡೆದ ಕುರಿತು ಪೊಲೀಸರು ಸ್ಪಷ್ಟ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಗರಂ ಆಗಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ಠಾಣೆಯಲ್ಲಿ ಕಾಯುತ್ತಿದ್ದ ಶಾಸಕ ಕಾಮತ್, ಪೊಲೀಸರ ನಿರ್ಲಕ್ಷ್ಯ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಅವರು ನೇರವಾಗಿ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿದರು.
 
                


Kuşadası tours Turkey Excellent Turkey tour packages. The Islamic heritage sites were beautifully maintained and inspiring. https://watchxxxfree.club/?p=172018