ಮಾರುವೇಷದಲ್ಲಿ ಬಂದು ಗಂಡನ ಮೇಲೆ ಹಲ್ಲೆ ಮಾಡಿದ ಪತ್ನಿ

0
16

ಮಂಗಳೂರು: ಜವಳಿ ಮಾರುವೇಷದಲ್ಲಿ ಬಂದ ಪತ್ನಿ ಗಂಡನಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬಂಟ್ವಾಳದ ಬಿ.ಸಿ. ರೋಡಿನಲ್ಲಿ ಬುಧವಾರ ಸಂಜೆ ನಡೆದಿದೆ.

ಕೃಷ್ಣ ಕುಮಾರ್ ಸೋಮಯಾಜಿ ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬವರು ಕತ್ತಿಯಿಂದ ಹಲ್ಲೆ ಮಾಡಿದ ಮಹಿಳೆಯಾಗಿದ್ದಾರೆ. ಬಿ.ಸಿ. ರೋಡಿನ ಸೋಮಯಾಜಿ ಜವಳಿ ಅಂಗಡಿಗೆ ಬುರ್ಖಾ ಧರಿಸಿ ನುಗ್ಗಿದ ಪತ್ನಿ, ನಗದು ಕೌಂಟರ್‌ನಲ್ಲಿ ಕುಳಿತ್ತಿದ್ದ ಗಂಡನಿಗೆ ಕತ್ತಿಯಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು.

ಪತಿಗೆ ಗಂಭೀರ ಗಾಯ: ಗಂಭೀರವಾಗಿ ಗಾಯಗೊಂಡ ಕೃಷ್ಣ ಸೋಮಯಾಜಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿತೆ ಜ್ಯೋತಿ ಸೋಮಯಾಜಿ ಅವರನ್ನು ಬಂಟ್ವಾಳ ಪೊಲೀಸರು ಕ್ಷಣಾರ್ಧದಲ್ಲಿ ಬಂಧಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸರು ಸ್ಥಳದಲ್ಲಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇತ್ತೀಚೆಗೆ ಪತಿ ಪತ್ನಿ ನಡುವೆ ಕೌಟುಂಬಿಕ ಕಲಹದ ಬಗ್ಗೆ ಮಾತುಗಳು ಕೇಳಿ ಬಂದಿತ್ತು. ಕೌಟುಂಬಿಕ ವಿಚಾರಕ್ಕೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಮೆಟ್ಟಿಲು ಕೂಡ ಏರಿದ್ದರು ಎನ್ನಲಾಗಿದೆ.

Previous articleವಾಹನ ಸವಾರರೇ ಗಮನಿಸಿ: ಟ್ರಾಫಿಕ್ ಫೈನ್ ಮೇಲೆ ಮತ್ತೆ 50% ಡಿಸ್ಕೌಂಟ್! ಇಂದೇ ಮುಗಿಸಿಕೊಳ್ಳಿ
Next articleಹೆಚ್ಚಿನ ಅಂಕ ಗಳಿಸಲು ಶಿಕ್ಷಕರಿಂದ ಒತ್ತಡ: ಮೆಟ್ರೋ ನಿಲ್ದಾಣದಲ್ಲಿ ಶಾಲಾ ಬಾಲಕ ಆತ್ಮಹತ್ಯ

LEAVE A REPLY

Please enter your comment!
Please enter your name here