ಶಾಸಕರ ಭೇಟಿಗೆ ಬಂದಿದ್ದ ವ್ಯಕ್ತಿ ಮೇಲೆ ಹಲ್ಲೆ: 7 ಜನರ ವಿರುದ್ಧ ಪ್ರಕರಣ

ದಾವಣಗೆರೆ: ಸ್ಥಳೀಯ ಶಾಸಕರನ್ನು ಭೇಟಿ ಮಾಡಲು ಬಂದಿದ್ದ ಕಾರು ಕನ್ಸಲ್ಟೆನ್ಸಿ ಉದ್ಯಮಿಯೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಏಳು ಜನರ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾವಣಗೆರೆಯ ದೇವರಾಜ ಅರಸು ಬಡಾವಣೆಯ ನಿವಾಸಿ ಮೊಹಮ್ಮದ್ ಖಾಲೀದ್ (33) ಹಲ್ಲೆಗೊಳಗಾದವರು. ಸೆ. 26ರಂದು ರಾತ್ರಿ ಸುಮಾರು 8.30ಕ್ಕೆ ಮಟ್ಟಿಕಲ್ಲಿನ ಕಲ್ಲೇಶ್ವರ ರೈಸ್ ಮಿಲ್ ಬಳಿ ಶಾಸಕರನ್ನು ಭೇಟಿ ಮಾಡಲು ತೆರಳಿದ್ದ ವೇಳೆ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. … Continue reading ಶಾಸಕರ ಭೇಟಿಗೆ ಬಂದಿದ್ದ ವ್ಯಕ್ತಿ ಮೇಲೆ ಹಲ್ಲೆ: 7 ಜನರ ವಿರುದ್ಧ ಪ್ರಕರಣ