ರಾಜಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದಾವಣಗೆರೆ: ನಗರದ ಅರುಣ ಚಿತ್ರಮಂದಿರದ ಬಳಿಯ ರೈಲ್ವೆ ಗೇಟ್ ಸಮೀಪದ ರೈಲ್ವೆ ಸೇತುವೆ ಕೆಳಗಿನ ರಾಜಕಾಲುವೆಯಲ್ಲಿ ಬುಧವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಗೆ ಅಂದಾಜು 45ರಿಂದ 50 ವರ್ಷ ವಯಸ್ಸಾಗಿರಬಹುದು ಎಂದು ತಿಳಿದುಬಂದಿದೆ. ರೈಲ್ವೆ ಸೇತುವೆ ಮೇಲಿನಿಂದ ಬಿದ್ದು ಮೃತಪಟ್ಟಿರಬಹುದು ಎಂಬ ಶಂಕೆ ಆರಂಭದಲ್ಲಿ ವ್ಯಕ್ತವಾಗಿತ್ತು. ಆದರೆ ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಂಡುಬರದ ಹಿನ್ನೆಲೆಯಲ್ಲಿ ಇದು ಸಹಜ ಸಾವು ಇರಬಹುದು ಎಂದು ರೈಲ್ವೆ ಪೊಲೀಸರು ಶಂಕಿಸಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, … Continue reading ರಾಜಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ