ದಾವಣಗೆರೆ: ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮಧ್ಯಾಹ್ನದ ಹೊತ್ತಿಗೆ ಎರಡೂ ಕ್ಷೇತ್ರಗಳಲ್ಲಿ ಶೇ. 50 ರಷ್ಟು ಮತದಾನವಾಗಿದೆ.
ಬಾಗಲಕೋಟೆ ಕ್ಷೇತ್ರದಲ್ಲಿ ಎಚ್.ವೈ ಮೇಟಿ ಅವರ ನಿಧನದಿಂದಾಗಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಶೇ. 54.82 ರಷ್ಟು ಮತದಾನವಾಗಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಉಪ ಚುನಾವಣೆ ನಡೆಯುತ್ತಿದ್ದು, ಸದ್ಯ 49.66 ರಷ್ಟು ಮತದಾನವಾಗಿದೆ.























