ವೈಫಲ್ಯ ಮುಚ್ಚಿಡಲು ಕಾಂಗ್ರೆಸ್ ಪ್ರಯತ್ನ: ರಾಜೀವ್ ಪಿ. ಕುಡುಚಿ

0
68

ದಾವಣಗೆರೆ: ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಟ್ಟು, ಜನರ ಗಮನ ಬೇರೆಡೆ ಸೆಳೆಯಲು ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿರುವುದರ ಬಗ್ಗೆ ಪರೋಕ್ಷವಾಗಿ ವಿಷಯ ಹರಿಬಿಟ್ಟಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ರಾಜೀವ್ ಪಿ. ಕುಡುಚಿ ಆರೋಪಿಸಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ರೈತರ ಆತ್ಮಹತ್ಯೆ, ಸರ್ಕಾರಿ ನೌಕರರ ಮತ್ತು ಗುತ್ತಿಗೆದಾರರ ಆತ್ಮಹತ್ಯೆಗಳು ಹೆಚ್ಚಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಇಂಥ ವೈಫಲ್ಯಗಳನ್ನು ಮುಚ್ಚಿಡಲು ವ್ಯವಸ್ಥಿತವಾಗಿ ಈಗ ಯತೀಂದ್ರ ಅವರಿಂದ ಮುಂದಿನ ನಾಯಕ ಸತೀಶ್ ಜಾರಕಿಹೊಳಿ ಎಂದು ಹೇಳಿಸಿ, ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಲಾಗುತ್ತಿದೆ ಎಂದರು.

ಮಾತೆತ್ತಿದರೆ ಕೆಂದ್ರ ಸರ್ಕಾರ ರಾಜ್ಯದ ಜಿಎಸ್ ಟಿ ಪಾಲನ್ನು ನೀಡದೆ ತಾರತಮ್ಯ ಮಾಡುತ್ತಿದೆ ಎನ್ನುವ ಸಿಎಂ ಸಿದ್ಧರಾಮಯ್ಯ ತೆರಿಗೆ ಹಣ ನೀಡದೆ ಯಾವ ಆಧಾರದಲ್ಲಿ ಮೂರು ಬಜೆಟ್ ಮಂಡಿಸಿದ್ದಾರೆ? ಹಣಕಾಸು ಆಯೋಗ ಶಿಫಾರಸ್ಸು ಮಾಡಿರುವ ಎಲ್ಲಾ ಹಣವೂ ಕೆಂದ್ರದಿಂದ ರಾಜ್ಯಕ್ಕೆ ಬಂದಿದೆ ಎಂದು ಸಮರ್ಥಿಸಿಕೊಂಡರು.

ಕಾಂಗ್ರೆಸ್ ನಲ್ಲಿರುವಂತೆ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕುವ ಪ್ರಶ್ನೆಯೇ ಇಲ್ಲ. ಅರ್ಹತೆಯಿದ್ದವರು ಮಾತ್ರ ಇಲ್ಲಿ ನಾಯಕರಾಗುತ್ತಾರೆ. ಅದೇ ರೀತಿ ಬಿ.ವೈ. ವಿಜಯೇಂದ್ರ ಮತ್ತು ಬಿ.ವೈ. ರಾಘವೇಂದ್ರ ಅರ್ಹತೆಗನುಸಾರ ನಾಯಕರಾಗಿದ್ದಾರೆ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Previous articleವೆನ್ಲಾಕ್ ಆಸ್ಪತ್ರೆಗೆ ಐಸಿಯು ಘಟಕ ಹೆಚ್ಚಿಸುವ ಅಗತ್ಯ: ಶಾಸಕ ವೇದವ್ಯಾಸ ಕಾಮತ್ ಸರ್ಕಾರಕ್ಕೆ ಆಗ್ರಹ
Next articleಕಚ್ಚಾ ತೈಲ – ಸಂಸ್ಕರಿಸಿದ ಉತ್ಪನ್ನಗಳ ರಫ್ತು ನಿರ್ಬಂಧದ ಕುರಿತು ರಿಲಯನ್ಸ್ ಇಂಡಸ್ಟ್ರೀಸ್ ಸ್ಪಷ್ಟನೆ

LEAVE A REPLY

Please enter your comment!
Please enter your name here