Home Advertisement
Home ನಮ್ಮ ಜಿಲ್ಲೆ ದಾವಣಗೆರೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಬಂಡಾಯ: ಪೈಲ್ವಾನ್ ನಾಮಪತ್ರ ಸಲ್ಲಿಕೆ

ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಬಂಡಾಯ: ಪೈಲ್ವಾನ್ ನಾಮಪತ್ರ ಸಲ್ಲಿಕೆ

0
85

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕಾಂಗ್ರೆಸ್ ಒಳಜಗಳ ಈಗ ಬಯಲಿಗೆ ಬಂದಿದೆ. ಕಾಂಗ್ರೆಸ್ ಹೈಕಮಾಂಡ್ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ಘೋಷಿಸಿದ ಬೆನ್ನಲ್ಲೇ, ಟಿಕೆಟ್ ಆಕಾಂಕ್ಷಿಯಾಗಿದ್ದ ಸಾದಿಕ್ ಪೈಲ್ವಾನ್ ಬಂಡಾಯದ ಬಾವುಟ ಎತ್ತಿ ಇಂದು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಇಂದು ಸಾದಿಕ್ ಪೈಲ್ವಾನ್ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ಕಾಂಗ್ರೆಸ್ ವಿರುದ್ಧ ನೇರ ಸವಾಲು ಹಾಕಿದ್ದಾರೆ. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಸಾದಿಕ್ ಪೈಲ್ವಾನ್, “ನಾನು ಬಾಲ್ಯದಿಂದಲೇ ಪೈಲ್ವಾನ್. ಒಮ್ಮೆ ಅಖಾಡಕ್ಕಿಳಿದರೆ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂದು ಕೇಳಿದ್ದೆವು. ಆದರೆ ಅದನ್ನು ಕಡೆಗಣಿಸಲಾಗಿದೆ. ಹೀಗಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದೇನೆ,” ಎಂದು ಹೈಕಮಾಂಡ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತ ಸಮುದಾಯದ ಬೆಂಬಲ ಸಾದಿಕ್ ಪೈಲ್ವಾನ್ ಕಡೆ ತಿರುಗುವ ಸಾಧ್ಯತೆ ಇದ್ದು ಬಂಡಾಯ ಅಭ್ಯರ್ಥಿ ಸ್ಪರ್ಧೆಯಿಂದ ಕಾಂಗ್ರೆಸ್ ಮತಭಾಗದಲ್ಲಿ ಭೇದ ಉಂಟಾಗುವ ಭೀತಿ ಇದೆ, ಬಿಜೆಪಿ ಈಗಾಗಲೇ ಶಕ್ತಿ ಪ್ರದರ್ಶನ ನಡೆಸಿದ್ದು, ಈ ಬೆಳವಣಿಗೆಗಳಿಂದ ಲಾಭ ಪಡೆಯುವ ನಿರೀಕ್ಷೆ ನಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗ ತ್ರಿಕೋನ ಸ್ಪರ್ಧೆ ರೂಪುಗೊಳ್ಳುವ ಲಕ್ಷಣಗಳು ಕಂಡುಬರುತ್ತಿದ್ದು, ಉಪಚುನಾವಣೆ ಕಣ ಮತ್ತಷ್ಟು ಕುತೂಹಲಕಾರಿಯಾಗಿದೆ.

ಸುದ್ದಿಯ ಹೆಚ್ಚಿನ ವಿವರಗಳು ಶೀಘ್ರದಲ್ಲೇ ಅಪ್‌ಡೇಟ್ ಆಗಲಿವೆ