Home ನಮ್ಮ ಜಿಲ್ಲೆ ದಾವಣಗೆರೆ ದಾವಣಗೆರೆ: ಸಮೀಕ್ಷೆಗೆ ಗೈರು – ಶಿಕ್ಷಕರು ಸೇರಿದಂತೆ ಮೂವರು ಸಿಬ್ಬಂದಿಗಳ ಅಮಾನತು

ದಾವಣಗೆರೆ: ಸಮೀಕ್ಷೆಗೆ ಗೈರು – ಶಿಕ್ಷಕರು ಸೇರಿದಂತೆ ಮೂವರು ಸಿಬ್ಬಂದಿಗಳ ಅಮಾನತು

0

ದಾವಣಗೆರೆ: ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಗೈರಾದ ಇಬ್ಬರು ಶಿಕ್ಷಕರು ಸೇರಿ ಮೂರು ಸಿಬ್ಬಂದಿಯನ್ನು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಮಾನತು ಮಾಡಿ ಆದೇಶಿಸಿದ್ದಾರೆ.
ಜಮಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಡಿ.ಕೆ. ಮಂಜುನಾಥ, ನಾಗನೂರಿನ ಸರ್ಕಾರಿ ಪ್ರೌಢಶಾಲೆ ಯ ದೈಹಿಕ ಶಿಕ್ಷಕ ಹೆಚ್. ಬಸವರಾಜಪ್ಪ ಮತ್ತು ಮಾಯಕೊಂಡದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಕೆ.ಆರ್ ದುರ್ಗಪ್ಪ ಇವರು ಅಮಾನತ್ತುಗೊಂಡವರು.

ಗೈರಾದವರಿಗೆ ನೋಟಿಸ್ ನೀಡಿದಾಗ್ಯೂ ಇವರು ಸಮಜಾಯಿಸಿಯನ್ನು ನೀಡದೆ ಸಮೀಕ್ಷಾ ಕಾರ್ಯಕ್ಕೆ ಗೈರುಹಾಜರಾಗಿರುವುದರಿಂದ ಮೂವರು ನೌಕರರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಕರ್ನಾಟಕ ಸರ್ಕಾರಿ ಸಿವಿಲ್ ವರ್ಗೀಕರಣ ಮತ್ತು ಅಪೀಲು ನಿಯಮಾವಳಿ 1957ರ ನಿಯಮ 10(1)(d) ಅನ್ವಯ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ ಎಂದು ತಿಳಿಸಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version