ದೀಪಾವಳಿ ಲಕ್ಷ್ಮೀ ಪೂಜೆ ವೇಳೆ ಬೆಂಕಿ ಅವಘಡ: ಅಂಗಡಿ ಮಾಲೀಕ ಸಾವು

ದಾವಣಗೆರೆ: ಸಾಸ್ವೆಹಳ್ಳಿ ಹೋಬಳಿಯ ಕ್ಯಾಸಿನಕೆರೆ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಅಂಗಡಿ ಮಾಲೀಕರೊಬ್ಬರು ಸಜೀವ ದಹನಗೊಂಡು ಮೃತಪಟ್ಟಿದ್ದಾರೆ. ಮೃತರನ್ನು ಗ್ರಾಮದ ನಿವಾಸಿ ಶಂಕ್ರಯ್ಯ (55) ಎಂದು ಗುರುತಿಸಲಾಗಿದೆ. ಇವರು ಗ್ರಾಮದ ರಸ್ತೆ ಬದಿಯಲ್ಲಿ ಗೂಡಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಸೋಮವಾರ ಬೆಳಿಗ್ಗೆ ದೀಪಾವಳಿ ಹಬ್ಬದ ಅಂಗವಾಗಿ ತಮ್ಮ ಅಂಗಡಿಯಲ್ಲಿ ಲಕ್ಷ್ಮೀ ಪೂಜೆ ಮಾಡುತ್ತಿದ್ದ ವೇಳೆ, ಅಂಗಡಿಯಲ್ಲಿ ಸಂಗ್ರಹಿಸಿಟ್ಟಿದ್ದ ಪೆಟ್ರೋಲ್ ಬಾಟಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ ಎನ್ನಲಾಗಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಅಂಗಡಿಗೆ ವ್ಯಾಪಿಸಿದ್ದು, … Continue reading ದೀಪಾವಳಿ ಲಕ್ಷ್ಮೀ ಪೂಜೆ ವೇಳೆ ಬೆಂಕಿ ಅವಘಡ: ಅಂಗಡಿ ಮಾಲೀಕ ಸಾವು