Home Advertisement
Home ನಮ್ಮ ಜಿಲ್ಲೆ ದಾವಣಗೆರೆ ದಾವಣಗೆರೆ ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್

ದಾವಣಗೆರೆ ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್

0
6

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯವೂ ಈ ಬಾರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮೂರು ಜನರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ ಎಂದು ಪ್ರೊ. ಕುಂಬಾರ ಹೇಳಿದರು.

ದಾವಣಗೆರೆ ವಿವಿಯ 13ನೇ ಘಟಿಕೋತ್ಸವದ ಸಮಯದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಎಲ್. ರೇವಣಸಿದ್ಧಪ್ಪ, ಶೈಕ್ಷಣಿಕ ಸಂಘಟಕ, ಹೋರಾಟಗಾರ ಮತ್ತು ಹಿರಿಯ ಪ್ರಾಧ್ಯಾಪಕ ಪ್ರೊ.ಸಿ.ಎಚ್.ಮುರಿಗೇಂದ್ರಪ್ಪ, ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಸಮಾಜ ಸೇವಕ ಎಂ.ರಾಮಪ್ಪ ಅವರಿಗೆ ಈ ಬಾರಿ ವಿಶ್ವವಿದ್ಯಾನಿಲಯ ವತಿಯಿಂದ ಡಿ.ಲಿಟ್-ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.

ವಿದ್ಯಾರ್ಥಿನಿಯರು ಮೇಲುಗೈ: ದಾವಣಗೆರೆ ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಒಟ್ಟು 12,706 ವಿದ್ಯಾರ್ಥಿಗಳಿಗೆ ಜ. 30ರಂದು ನಡೆಯುವ 13ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ 45 ವಿದ್ಯಾರ್ಥಿಗಳು 87 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. 70 ಸಂಶೋಧನಾರ್ಥಿಗಳು ಪಿಎಚ್.ಡಿ. ಪದವಿ ಪಡೆದಿದ್ದಾರೆ.

ಈ ಬಾರಿಯೂ ಚಿನ್ನದ ಪದಕಗಳ ಬೇಟೆಯಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಇದಲ್ಲದೆ 30 ಮಹಿಳೆಯರು ಪಿಎಚ್.ಡಿ. ಪದವಿ ಪಡೆದಿರುವುದು ವಿಶೇಷ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿಯೂ ಮಹಿಳೆಯರೇ ಉನ್ನತಿ ಸಾಧಿಸುತ್ತಿರುವುದು ಗಮನಾರ್ಹ ಸಂಗತಿ ಎಂದು ತಿಳಿಸಿದರು.

Previous articleಚಿತ್ರೋದ್ಯಮದ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ಧ: ಸಿಎಂ ಸಿದ್ದರಾಮಯ್ಯ
Next articleಮದುಮಗನಿಗೆ ಚಾಕು ಇರಿತ: ಭಯದಿಂದ ಮದುವೆ ಬೇಡವೆಂದ ವರ