ಅಪ್ರಾಪ್ತೆಗೆ ಚುಡಾಯಿಸಿದ ಹಾಸ್ಟೆಲ್ ವಿದ್ಯಾರ್ಥಿ: ಮಹಿಳೆಯರಿಂದ ಕಪಾಳಮೋಕ್ಷ

ದಾವಣಗೆರೆ: ಅಪ್ರಾಪ್ತ ಬಾಲಕಿಯನ್ನು ಮನೆವರೆಗೂ ಹಿಂಬಾಲಿಸಿಕೊಂಡು ಹೋಗಿ ಚುಡಾಯಿಸಿದ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ಹಾಸ್ಟೆಲ್‌ನ ವಿದ್ಯಾರ್ಥಿಯೊಬ್ಬನಿಗೆ ಸ್ಥಳೀಯ ಮಹಿಳೆಯರು ಕಪಾಳಮೋಕ್ಷ ಮಾಡಿ, ಬುದ್ಧಿವಾದ ಹೇಳಿದ ಘಟನೆ ದಾವಣಗೆರೆಯ ಶಂಕರ ವಿಹಾರ ಬಡಾವಣೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ವಾಸವಿದ್ದುಕೊಂಡು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಬಾಲಕಿಯನ್ನು ಹಿಂಬಾಲಿಸಿ ಚುಡಾಯಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ವಿಚಾರ ತಿಳಿದ ಸ್ಥಳೀಯ ಮಹಿಳೆಯರು ಹಾಸ್ಟೆಲ್‌ಗೆ ತೆರಳಿ ವಿದ್ಯಾರ್ಥಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಭಾಗದಲ್ಲಿ ಹಾಸ್ಟೆಲ್‌ನ ಕೆಲವು … Continue reading ಅಪ್ರಾಪ್ತೆಗೆ ಚುಡಾಯಿಸಿದ ಹಾಸ್ಟೆಲ್ ವಿದ್ಯಾರ್ಥಿ: ಮಹಿಳೆಯರಿಂದ ಕಪಾಳಮೋಕ್ಷ