ದಾವಣಗೆರೆ: ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ ಅಂತಾರಾಷ್ಟ್ರೀಯ ಸಮಸ್ಯೆ ಮತ್ತು ನಮ್ಮ ಎಲ್‌ಪಿಜಿ ಅವಲಂಬನೆಯಲ್ಲಿ ಶೇ.50ರಷ್ಟಿಕ್ಕಿಂತ ಹೆಚ್ಚು ಆಮದಿನ ಮೇಲೆ ಇದೆ. ಪ್ರಸ್ತುತ ನಾವು ಎಲ್ಲಾ ತೊಂದರೆಗಳನ್ನು ಎದುರಿಸುತ್ತಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಶನಿವಾರ ಮಾಧ್ಯಮದವರೊಂದಿಗೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ₹993 ಹೆಚ್ಚಳಕ್ಕೆ ರೀತಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, “ಅದು ಅಂತಾರಾಷ್ಟ್ರೀಯ ಸಮಸ್ಯೆ. ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್ ಮತ್ತು ದೇಶೀಯ ಎಲ್‌ಪಿಜಿ ಬೆಲೆಯನ್ನು ಹಾಗೆಯೇ ಕಾಯ್ದುಕೊಂಡಿದೆ ಎಂದು ತಿಳಿಸಿದರು.
ಸಿಎಂ ಕಾಂಗ್ರೆಸ್‌ನ ಆಂತರಿಕ ವಿಷಯ: ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ಚರ್ಚೆ ನಡೆಸುತ್ತಿದೆ ಎಂಬ ಮಾಹಿತಿ ಇದೆ. ಆದರೆ ಯಾರು ಮುಖ್ಯಮಂತ್ರಿ ಆಗಬೇಕು ಎಂಬುದರಲ್ಲಿ ತಮ್ಮ ಪಕ್ಷದ ಪಾತ್ರವಿಲ್ಲ, ಅದು ಕಾಂಗ್ರೆಸ್‌ನ ಆಂತರಿಕ ವಿಷಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅಥವಾ ಜಿ. ಪರಮೇಶ್ವರ ಅವರ ಹೆಸರನ್ನು ಪ್ರಸ್ತಾಪಿಸುವುದು, ಡಿ.ಕೆ. ಶಿವಕುಮಾರ್ ಅವರು ಹೇಳಿದ 50-50 ಒಪ್ಪಂದದ ವಿಚಾರದಲ್ಲಿ ಗೊಂದಲ ಸೃಷ್ಟಿಸಲು ಮಾತ್ರ ಎಂದು ಆರೋಪಿಸಿದ ಅವರು, ಅಂತಹ ಒಪ್ಪಂದ ಇದ್ದೇ ಇದೆ ಎಂಬುದನ್ನು ಶಿವಕುಮಾರ್ ಅವರಿಗೆ ಮಾತ್ರ ಗೊತ್ತು ಎಂದು ಅವರು ತಿಳಿಸಿದರು.
ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಭ್ರಷ್ಟಾಚಾರದ ಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಕರ್ನಾಟಕ ಇಂದು ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನದಲ್ಲಿದೆ ಮತ್ತು ಸರ್ಕಾರಿ ನೌಕರರಿಗೆ ಸಂಬಳ ನೀಡಲು ಹಣದ ಕೊರತೆ ಇದೆ ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ, ಬಿಜೆಪಿ ಮುಖಂಡರು ಇದ್ದರು.























