ಹರಿಹರ: ವೀರಶೈವ ಪಂಚಮಸಾಲಿ ಗುರುಪೀಠದಲ್ಲಿ ಕೋಟ್ಯಾಂತರ ರೂಪಾಯಿ ಹಣದ ಅವ್ಯವಹಾರ ನಡೆದಿರುವ ಬಗ್ಗೆ ಪೀಠದ ಆಡಳಿತಾಧಿಕಾರಿ ಡಾ.ಹೆಚ್.ಪಿ. ರಾಜಕುಮಾರ ಗಂಭೀರ ಆರೋಪ ಮಾಡಿದರು.
ಶಿವಮೊಗ್ಗ-ಹೊಸಪೇಟೆ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ವೀರಶೈವ ಪಂಚಮಸಾಲಿ ಗುರುಪೀಠದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಕ್ತರು, ಸಮಾಜದ ಸದಸ್ಯರು, ನೌಕರರು ಹಾಗೂ ಸರ್ಕಾರದಿಂದ ಪೀಠಕ್ಕೆ ದೊಡ್ಡ ಪ್ರಮಾಣದಲ್ಲಿ ಹಣ ಸಂಗ್ರಹವಾಗಿದ್ದು, ಅದರಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿದರು.
ಈ ವಿಚಾರವನ್ನು ಮೊನ್ನೆ ನಡೆದ ಟ್ರಸ್ಟ್‌ನ ಸಭೆಯಲ್ಲಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ತಮ್ಮ ಜೀವಕ್ಕೂ ಹಾಗೂ ಪೀಠದ ಸ್ವಾಮೀಜಿಯವರ ಜೀವಕ್ಕೂ ಭಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಯಾವುದೇ ಅನಾಹುತ ಸಂಭವಿಸಿದರೆ ಅದಕ್ಕೆ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಬಿ.ಸಿ. ಉಮಾಪತಿ, ಕಾರ್ಯದರ್ಶಿ ಕೆ.ಎಂ. ಜ್ಯೋತಿಪ್ರಕಾಶ್ ಹಾಗೂ ಟ್ರಸ್ಟಿ ಚಂದ್ರಶೇಖರ್ ಪೂಜಾರ ಕಾರಣರಾಗುತ್ತಾರೆ ಎಂದು ಅವರು ನೇರವಾಗಿ ಆರೋಪಿಸಿದರು.























