ಕೌಟುಂಬಿಕ ಕಲಹಕ್ಕೆ ಬೇಸತ್ತು ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ

ದಾವಣಗೆರೆ: ಕೌಟುಂಬಿಕ ಕಲಹದಿಂದ ಮನನೊಂದ ವ್ಯಕ್ತಿಯೊಬ್ಬರು ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಗರದ ಎಪಿಎಂಸಿ ಅಂಡರ್ ಬ್ರಿಡ್ಜ್ ಸಮೀಪ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಕೆಟಿಜೆ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಮಂಜುನಾಥ್ (48) ಎಂದು ಗುರುತಿಸಲಾಗಿದೆ. ಟೈಲ್ಸ್ ಕೆಲಸ ಮಾಡುತ್ತಿದ್ದ ಮಂಜುನಾಥ್ ಅವರು ಕುಟುಂಬದ ಸಮಸ್ಯೆಗಳಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ದಾದರ್‌ನಿಂದ ಪುದುಚೇರಿಗೆ ತೆರಳುತ್ತಿದ್ದ ರೈಲಿಗೆ ಸಿಲುಕಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ಮಾಹಿತಿ … Continue reading ಕೌಟುಂಬಿಕ ಕಲಹಕ್ಕೆ ಬೇಸತ್ತು ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ