ದಾವಣಗೆರೆಯಲ್ಲಿ ವೇದ ಅಧ್ಯಯನ ಕೇಂದ್ರ ಸ್ಥಾಪನೆಗೆ ಶ್ರೀಗಳ ಯೋಜನೆ
ದಾವಣಗೆರೆ: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಗಳು ಮತ್ತು ಹತ್ಯೆಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು. “ಬಾಂಗ್ಲಾದಲ್ಲಿ ಮಾತ್ರವಲ್ಲ, ಭಾರತದಲ್ಲೂ ಹಿಂದೂಗಳ ಸ್ಥಿತಿ ಹೀನಾಯವಾಗಿದೆ” ಎಂದು ಹೇಳಿದ್ದಾರೆ.
ಶುಕ್ರವಾರ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಘಟನೆಗಳು ಮಾನವೀಯ ಮೌಲ್ಯಗಳಿಗೆ ಧಕ್ಕೆ ತರುತ್ತಿವೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್ ಪಂದ್ಯ
ಗೋ ಹತ್ಯೆ ನಿಷೇಧದ ಬಗ್ಗೆ ಅಭಿಪ್ರಾಯ: ಗೋ ಹತ್ಯೆ ನಿಷೇಧ ಕುರಿತು ಮಾತನಾಡಿದ ಅವರು, ಸರ್ಕಾರ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು. ಪ್ರತೀ ಜಿಲ್ಲೆಯಲ್ಲಿ ಗೋಶಾಲೆಗಳನ್ನು ಸ್ಥಾಪಿಸುವ ಅಗತ್ಯವಿದೆ. ಗೋವುಗಳಿಗೆ ಮೀಸಲಾದ ಗೋಮಾಳ ಭೂಮಿಯನ್ನು ಕೇವಲ ಗೋವುಗಳ ಪಾಲನೆಗೆ ಮಾತ್ರ ಬಳಸಬೇಕು. ಆದರೆ, ಈಗ ಆ ಭೂಮಿಯನ್ನು ಬೇರೆ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
RSS ಕುರಿತು ಪ್ರತಿಕ್ರಿಯೆ: ಪತ್ರಕರ್ತರು ಆರ್‌ಎಸ್‌ಎಸ್ ನಿಷೇಧ ಕುರಿತ ಪ್ರಶ್ನೆ ಕೇಳಿದಾಗ, Rashtriya Swayamsevak Sangh ರಾಷ್ಟ್ರರಕ್ಷಣೆಯ ಕೆಲಸ ಮಾಡುತ್ತಿರುವ ಸಂಸ್ಥೆ. ಇಂತಹ ಸಂಘಟನೆ ಬಗ್ಗೆ ತಪ್ಪು ಅಭಿಪ್ರಾಯ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಹೇಳಿದರು.
ಇದನ್ನೂ ಓದಿ: ವಿಜಯಪುರದಲ್ಲಿ ದ್ರಾಕ್ಷಿ ಕ್ರಾಂತಿ: ‘California’ ಕನಸು ನನಸಾಗುತ್ತಿದೆ
ವೇದ ಅಧ್ಯಯನ ಕೇಂದ್ರ ಯೋಜನೆ : ದಾವಣಗೆರೆಯಲ್ಲಿ ಸೂಕ್ತ ಜಾಗ ದೊರೆತ ಬಳಿಕ ವೇದ ಅಧ್ಯಯನ ಕೇಂದ್ರ ಪ್ರಾರಂಭಿಸುವ ಯೋಜನೆ ಇದೆ. ಆದರೆ ನಮ್ಮಂತಹ ಧಾರ್ಮಿಕ ಸಂಸ್ಥೆಗಳಿಗೆ ಜಾಗ ದೊರಕುವುದು ಕಷ್ಟಕರವಾಗಿದೆ ಎಂದು ತಿಳಿಸಿದರು. ಕೇಂದ್ರ ಸರ್ಕಾರದೊಂದಿಗೆ ಇನ್ನೂ ಕೆಲವು ಯೋಜನೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದೂ ಹೇಳಿದರು.
ಶ್ರೀಗಳ ಈ ಹೇಳಿಕೆಗಳು ಸಾಮಾಜಿಕ ಮತ್ತು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.























