SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಜೂಜಾಟದ ಅಡ್ಡೆ ಮೇಲೆ ಪೊಲೀಸ್ ದಾಳಿ: 17 ಜನ ವಶಕ್ಕೆ

ಜೂಜಾಟದ ಅಡ್ಡೆ ಮೇಲೆ ಪೊಲೀಸ್ ದಾಳಿ: 17 ಜನ ವಶಕ್ಕೆ

0
27

ದಾವಣಗೆರೆ: ಜಿಲ್ಲೆಯ ವಿವಿಧ ತಾಲೂಕುಗಳ ಐದು ಕಡೆ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಇಸ್ಪೀಟ್ ಹಾಗೂ ಮಟ್ಕಾ ಜೂಜಾಟದ ಮೇಲೆ ಪೊಲೀಸರು ಪ್ರತ್ಯೇಕ ದಾಳಿ ನಡೆಸಿ, ಒಟ್ಟು 17 ಜನರನ್ನು ವಶಕ್ಕೆ ಪಡೆದು, ₹17,990 ನಗದು ಹಾಗೂ ಮಟ್ಕಾ ಚೀಟಿಗಳನ್ನು ವಶಪಡಿಸಿಕೊಂಡಿದ್ದಾರೆ.

ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಗ್ರಾಮದ ಬಸ್ ನಿಲ್ದಾಣದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ನ್ಯಾಮತಿ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ₹530 ನಗದು ಹಾಗೂ ಮಟ್ಕಾ ಚೀಟಿಗಳನ್ನು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಮಟ್ಕಾ ಜೂಜಾಟದ ಮೇಲೆ ಸಿಪಿಐ ಹಾಗೂ ಸಿಬ್ಬಂದಿ ದಾಳಿ ನಡೆಸಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದು, ₹5,500 ನಗದು ಹಾಗೂ ಮಟ್ಕಾ ಚೀಟಿಗಳನ್ನು ವಶಪಡಿಸಿಕೊಂಡಿದ್ದಾರೆ.

ಚನ್ನಗಿರಿ ತಾಲೂಕಿನ ಕೊರಟಿಕೆರೆ ಗ್ರಾಮದ ಕೆರೆ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಚನ್ನಗಿರಿ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದು, ₹3,700 ನಗದು ವಶಪಡಿಸಿಕೊಂಡಿದ್ದಾರೆ.

ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಡುತ್ತಿದ್ದವರ ಮೇಲೆ ಹರಿಹರ ವೃತ್ತದ ಪೊಲೀಸ್ ನಿರೀಕ್ಷಕರು ಹಾಗೂ ಗ್ರಾಮಾಂತರ ಠಾಣೆಯ ಸಿಬ್ಬಂದಿ ದಾಳಿ ನಡೆಸಿ ಒಂಬತ್ತು ಮಂದಿಯನ್ನು ವಶಕ್ಕೆ ಪಡೆದು, ₹5,160 ನಗದು ವಶಪಡಿಸಿಕೊಂಡಿದ್ದಾರೆ.

ಇನ್ನು ದಾವಣಗೆರೆ ತಾಲೂಕಿನ ಜರೇಕಟ್ಟೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಎ.ಎನ್.ಟಿ.ಎಫ್ ತಂಡ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದು, ₹3,100 ನಗದು ವಶಪಡಿಸಿಕೊಂಡಿದೆ. ಈ ಸಂಬಂಧ ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಐದು ಪ್ರತ್ಯೇಕ ದಾಳಿಗಳಿಗೆ ಸಂಬಂಧಿಸಿದಂತೆ ನ್ಯಾಮತಿ, ಗಾಂಧಿನಗರ, ಚನ್ನಗಿರಿ, ಹರಿಹರ ಗ್ರಾಮಾಂತರ ಹಾಗೂ ಹದಡಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಒಟ್ಟು 17 ಮಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.