ಬೆಣ್ಣೆನಗರಿಯಲ್ಲಿ ಸುರಿದ ಮಳೆ: ಜನಜೀವನ ಅಸ್ತವ್ಯಸ್ತ

ದಾವಣಗೆರೆ: ನಗರದಲ್ಲಿ ಮಂಗಳವಾರ ಮಧ್ಯಾಹ್ನ ಉತ್ತಮ ಮಳೆಯಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪಾದಚಾರಿಗಳು ಹಾಗೂ ವಾಹನ ಸವಾರರು ತೊಂದರೆ ಅನುಭವಿಸಿದರು. ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯಾಹ್ನ ಸುಮಾರು 2.30ಕ್ಕೆ ಆರಂಭವಾದ ಮಳೆ ಸುಮಾರು ಎರಡು ತಾಸು ನಿರಂತರವಾಗಿ ಸುರಿಯಿತು. ನಂತರ ಜಿಟಿಜಿಟಿಯಾಗಿ ಮಳೆ ಮುಂದುವರಿಯಿತು. ಮಳೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ನಿಧಾನಗೊಂಡಿತು. ಶಾಲೆ ಮತ್ತು ಕಾಲೇಜು ಬಿಡುವಿನ ವೇಳೆಗೆ ಮಳೆ ಸುರಿದ ಕಾರಣ ವಿದ್ಯಾರ್ಥಿಗಳು ಹಾಗೂ ಪೋಷಕರು ಪರದಾಡುವಂತಾಯಿತು. … Continue reading ಬೆಣ್ಣೆನಗರಿಯಲ್ಲಿ ಸುರಿದ ಮಳೆ: ಜನಜೀವನ ಅಸ್ತವ್ಯಸ್ತ