SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಉಚ್ಚಾಟಿತ ನಾಯಕರ ಮರು ಸೇರ್ಪಡೆ: ಹೈಕಮಾಂಡ್‌ಗೆ ಬಿಟ್ಟ ವಿಷಯ

ಉಚ್ಚಾಟಿತ ನಾಯಕರ ಮರು ಸೇರ್ಪಡೆ: ಹೈಕಮಾಂಡ್‌ಗೆ ಬಿಟ್ಟ ವಿಷಯ

0
64

ದಾವಣಗೆರೆ: ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಂಡಿರುವ ನಾಯಕರ ಮರು ಸೇರ್ಪಡೆ ವಿಚಾರವು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಿಂದ ಉಚ್ಚಾಟನೆಗೊಂಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕೆ.ಎಸ್. ಈಶ್ವರಪ್ಪ ಸೇರಿದಂತೆ ಉಚ್ಚಾಟಿತ ಬಿಜೆಪಿ ನಾಯಕರ ಮರು ಸೇರ್ಪಡೆಗೆ ಹೈಕಮಾಂಡ್ ಸುಳಿವು ನೀಡಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

‘ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಏನಿದ್ದರೂ ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡುತ್ತಿದೆ’ ಎಂದು ಅವರು ನಯವಾಗಿ ಉತ್ತರಿಸಿದರು.

ಇದನ್ನೂ ಓದಿ: ಹೊಸಪೇಟೆಯಲ್ಲಿ ಯುವಕನ ಬರ್ಬರ ಹತ್ಯೆ

ಉಚ್ಚಾಟಿತ ನಾಯಕರ ಮರು ಸೇರ್ಪಡೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಶ್ರೀರಾಮುಲು ಅವರ ಈ ಹೇಳಿಕೆ ಗಮನ ಸೆಳೆದಿದೆ. ಆದರೆ, ಈ ಕುರಿತು ಅವರು ಯಾವುದೇ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸದೇ, ಅಂತಿಮ ನಿರ್ಧಾರವನ್ನು ಪಕ್ಷದ ಕೇಂದ್ರ ನಾಯಕತ್ವಕ್ಕೆ ಬಿಟ್ಟಿದ್ದಾರೆ.