ಉಚ್ಚಾಟಿತ ನಾಯಕರ ಮರು ಸೇರ್ಪಡೆ: ಹೈಕಮಾಂಡ್‌ಗೆ ಬಿಟ್ಟ ವಿಷಯ

ದಾವಣಗೆರೆ: ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಂಡಿರುವ ನಾಯಕರ ಮರು ಸೇರ್ಪಡೆ ವಿಚಾರವು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಿಂದ ಉಚ್ಚಾಟನೆಗೊಂಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕೆ.ಎಸ್. ಈಶ್ವರಪ್ಪ ಸೇರಿದಂತೆ ಉಚ್ಚಾಟಿತ ಬಿಜೆಪಿ ನಾಯಕರ ಮರು ಸೇರ್ಪಡೆಗೆ ಹೈಕಮಾಂಡ್ ಸುಳಿವು ನೀಡಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ‘ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಏನಿದ್ದರೂ ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡುತ್ತಿದೆ’ ಎಂದು … Continue reading ಉಚ್ಚಾಟಿತ ನಾಯಕರ ಮರು ಸೇರ್ಪಡೆ: ಹೈಕಮಾಂಡ್‌ಗೆ ಬಿಟ್ಟ ವಿಷಯ