Home ನಮ್ಮ ಜಿಲ್ಲೆ ದಾವಣಗೆರೆ CM ಬದಲಾವಣೆ ಗೊಂದಲಕ್ಕೆ ಹೈಕಮಾಂಡ್ ಸ್ಪಷ್ಟನೆ ಅಗತ್ಯ: ಸತೀಶ್ ಜಾರಕಿಹೊಳಿ

CM ಬದಲಾವಣೆ ಗೊಂದಲಕ್ಕೆ ಹೈಕಮಾಂಡ್ ಸ್ಪಷ್ಟನೆ ಅಗತ್ಯ: ಸತೀಶ್ ಜಾರಕಿಹೊಳಿ

0

ಗೊಂದಲ ಮುಂದುವರಿದರೆ ಸರ್ಕಾರಕ್ಕೆ ಸಂಕಷ್ಟ: ಜಾರಕಿಹೊಳಿ ಎಚ್ಚರಿಕೆ

ದಾವಣಗೆರೆ: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳು ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಕಾಂಗ್ರೆಸ್ ಹೈಕಮಾಂಡ್ ಕೂಡಲೇ ಸ್ಪಷ್ಟನೆ ನೀಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಒತ್ತಾಯಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದೊಳಗಿನ ಅಸ್ಪಷ್ಟತೆಯಿಂದ ಆಡಳಿತ ಯಂತ್ರ ಮತ್ತು ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೆಡಿಪಿ ಸಭೆಯಲ್ಲಿ ಗದ್ದಲ: ಸಭೆಯಿಂದ ಹೊರನಡೆದ ಶಾಸಕ ಸತೀಶ್ ಸೈಲ್

ಉಸ್ತುವಾರಿ ಸಭೆಗಳು ಸಹಜ, ಆದರೆ ಗೊಂದಲ ನಿವಾರಣೆ ಅಗತ್ಯ : ಪಕ್ಷದ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲ ಅವರು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳೊಂದಿಗೆ ನಡೆಸುತ್ತಿರುವ ಸಭೆಗಳ ಬಗ್ಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ಉಸ್ತುವಾರಿಯಾಗಿ ಸಭೆ ನಡೆಸುವುದು ಸಹಜ ಪ್ರಕ್ರಿಯೆ ಎಂದರು. ಆದರೆ, ಪ್ರಸ್ತುತ ಸಿಎಂ ಬದಲಾವಣೆ ಕುರಿತ ಗೊಂದಲಗಳು ಶೀಘ್ರ ಬಗೆಹರಿಯಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ ಎಂದು ಹೇಳಿದರು.

“ಬಜೆಟ್ ನಂತರ ಬದಲಾವಣೆ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಹೈಕಮಾಂಡ್ ಸ್ಪಷ್ಟಪಡಿಸಬೇಕು. ಒಬ್ಬರು ಅರ್ಧ ಅವಧಿ ಎನ್ನುತ್ತಾರೆ, ಮತ್ತೊಬ್ಬರು ಪೂರ್ಣ ಅವಧಿ ಎನ್ನುತ್ತಾರೆ. ಈ ಗೊಂದಲವನ್ನು ದೆಹಲಿ ನಾಯಕತ್ವವೇ ನಿವಾರಿಸಬೇಕು,” ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಭಾರತ ಪ್ರವಾಸ : ವೇಳಾಪಟ್ಟಿ ಪ್ರಕಟ

ಅನಿಶ್ಚಿತತೆ ಮುಂದುವರಿದರೆ ಸರ್ಕಾರಕ್ಕೆ ಸಂಕಷ್ಟ: ಇದೇ ವೇಳೆ ಶಾಸಕ ಬಾಲಕೃಷ್ಣ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವರು, ಗೊಂದಲಗಳು ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಸರ್ಕಾರ ರಚನೆ ಕಷ್ಟವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದರು.

“ಈ ಅನಿಶ್ಚಿತತೆಯಿಂದ ಶಾಸಕರು, ಕಾರ್ಯಕರ್ತರು ಮಾತ್ರವಲ್ಲದೆ ಅಧಿಕಾರಿಗಳಲ್ಲೂ ಗೊಂದಲ ಸೃಷ್ಟಿಯಾಗುತ್ತಿದೆ. ಹೈಕಮಾಂಡ್ ಕಟ್ಟುನಿಟ್ಟಿನ ನಿರ್ಧಾರ ಪ್ರಕಟಿಸಿದರೆ ಮಾತ್ರ ರಾಜ್ಯ ರಾಜಕಾರಣದಲ್ಲಿ ಶಾಂತಿ ನೆಲೆಸುತ್ತದೆ,” ಎಂದು ಹೇಳಿದರು.

ಇದನ್ನೂ ಓದಿ: ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಭಾರತ ಪ್ರವಾಸ : ವೇಳಾಪಟ್ಟಿ ಪ್ರಕಟ

ಬಜೆಟ್ ಮತ್ತು ಅಭಿವೃದ್ಧಿ ಯೋಜನೆಗಳು: ಮುಂಬರುವ ಬಜೆಟ್‌ಗೆ ಸಂಬಂಧಿಸಿದಂತೆ ಈಗಾಗಲೇ ಇಲಾಖೆಯಿಂದ ಯೋಜನೆಗಳ ಪಟ್ಟಿಯನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದ ಅವರು, ರಾಜ್ಯ ಹೆದ್ದಾರಿಗಳ ದುರಸ್ತಿ ಮತ್ತು ನಿರ್ವಹಣೆಗೆ ಪಿಪಿಪಿ ಮಾದರಿಯಲ್ಲಿ ಟೆಂಡರ್ ಕರೆಯಲಾಗಿದೆ ಎಂದರು.

ಮರಿಯಮ್ಮನಹಳ್ಳಿ ಹಾಗೂ ಶಿವಮೊಗ್ಗ ಸೇರಿದಂತೆ ನಾಲ್ಕು ಪ್ರಮುಖ ಮಾರ್ಗಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ವಿವರಿಸಿದರು.