ದಾವಣಗೆರೆ: ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ, ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ರವಿವಾರ ಸಂಜೆ 6.45ರ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
94 ವರ್ಷ ವಯಸ್ಸಿನವರಾದ ಶಾಮನೂರು ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಅಕ್ಟೋಬರ್‌ನಲ್ಲಿ ತಮ್ಮ ಪುತ್ರಿಯ ಒಡೆತನದ ಸ್ಪರ್ಶ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ತೊಂದರೆ, ಕಿಡ್ನಿವೈಫಲ್ಯದಿಂದ ಬಳಲುತ್ತಿದ್ದ ಶಾಮನೂರು ಅವರಿಗೆ ಆಸ್ಪತ್ರೆಯಲ್ಲಿಯೇ ದೀರ್ಘಕಾಲದಿಂದ ಚಿಕಿತ್ಸೆ ನೀಡಲಾಗುತ್ತಿತ್ತು.
ಇದನ್ನೂ ಓದಿ: ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆದರೆ ಬಿಜೆಪಿ ಗೆಲ್ಲುವುದಿಲ್ಲ
ಆದರೆ, ಭಾನುವಾರ ಸಂಜೆ 6:45ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದು, ಅವರ ಅಭಿಮಾನಿಗಳಿಗೆ ಬರಸಿಡಿಲು ಬಡಿದಂತಾಗಿದೆ. ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಶಾಮನೂರು ಕೊಡುಗೆ ದಾವಣಗೆರೆಗೆ ಅಪಾರ. ಶಾಮನೂರು ಅವರ ಸಾವಿಗೆ ಪಕ್ಷಾತೀತವಾಗಿ ಸಚಿವರು, ಮುಖಂಡರು, ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ.









