ದಾವಣಗೆರೆ-ಚಿತ್ರದುರ್ಗಕ್ಕೆ ಪ್ರತ್ಯೇಕ ಹಾಲು ಒಕ್ಕೂಟ: ಶೀಘ್ರವೇ ಭೂಮಿಪೂಜೆ

ದಾವಣಗೆರೆ: ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ರೈತರ ಹಿತದೃಷ್ಟಿಯಿಂದ ತಾಲೂಕಿನ ಎಚ್. ಕಲ್ಪನಹಳ್ಳಿ ಗ್ರಾಮದ ಸಮೀಪ ₹280 ಕೋಟಿ ವೆಚ್ಚದಲ್ಲಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಹಾಲು ಒಕ್ಕೂಟ ಕೇಂದ್ರ ನಿರ್ಮಾಣಕ್ಕೆ ಶೀಘ್ರದಲ್ಲೇ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ತಿಳಿಸಿದರು. ತಾಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಗುಡಾಳು ಗ್ರಾಮದಲ್ಲಿ ಸೋಮವಾರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ … Continue reading ದಾವಣಗೆರೆ-ಚಿತ್ರದುರ್ಗಕ್ಕೆ ಪ್ರತ್ಯೇಕ ಹಾಲು ಒಕ್ಕೂಟ: ಶೀಘ್ರವೇ ಭೂಮಿಪೂಜೆ