Home ನಮ್ಮ ಜಿಲ್ಲೆ ದಾವಣಗೆರೆ ಶಾಮನೂರು ಆರೋಗ್ಯ ಚೇತರಿಕೆ: ಎಸ್ಸೆಸ್ಸೆಂ

ಶಾಮನೂರು ಆರೋಗ್ಯ ಚೇತರಿಕೆ: ಎಸ್ಸೆಸ್ಸೆಂ

0

ದಾವಣಗೆರೆ: ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಶಾಮನೂರು ಪುತ್ರ, ಜಿಲ್ಲಾ ಉಸ್ತುವಾರಿ ಸಚಿವ, ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆ ಶಾಮನೂರು ಆರೋಗ್ಯ ಚೇತರಿಕೆಗಾಗಿ ಅವರ ಅಭಿಮಾನಿಗಳು ಹೋಮ-ಹವನ, ಪೂಜೆ-ಪುನಸ್ಕಾರಗಳನ್ನು ಮಾಡಿದ್ದಾರೆ, ದೇವರ ಆಶೀರ್ವಾದ ಮತ್ತು ಜನರ ಪ್ರೀತಿ, ವಿಶ್ವಾಸದಿಂದ ಅವರೀಗ ಗುಣಮುಖರಾಗಿದ್ದು, ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ತಿಳಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version