ಶಾಮನೂರಿನಿಂದ ದಾವಣಗೆರೆ ಧಣಿಯಾದ ಶಿವಶಂಕರಪ್ಪ

0
11

ದಾವಣಗೆರೆ: ದಾವಣಗೆರೆ ಧಣಿ ಎಂದೇ ಖ್ಯಾತರಾಗಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಭಾನುವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕರಪ್ಪ ತಮ್ಮ ಪುತ್ರಿಯ ಒಡೆತನದ ಸ್ಪರ್ಶ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಬಾರದ ಲೋಕಕ್ಕೆ ಪಯಣ ಬಳಸಿದ್ದಾರೆ.

95ನೇ ವಯಸ್ಸಿನಲ್ಲೂ ಅತ್ಯಂತ ಕ್ರೀಯಾಶೀಲರಾಗಿದ್ದ ಶಾಮನೂರು ಶಿವಶಂಕರಪ್ಪ ಸದಾ ಜನಸೇವೆಯಲ್ಲಿಯೇ ತೊಡಗಿದ್ದರು. ಅಕ್ಕಿ ವ್ಯಾಪಾರ ಮಾಡುತ್ತಾ ರಾಜಕೀಯಕ್ಕೆ ಪ್ರವೇಶ ಮಾಡಿ ಬರೋಬ್ಬರಿ 6 ಬಾರಿ ಶಾಸಕರಾಗಿ, ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ: ಬ್ಯಾಲೆಟ್ ಪೇಪರ್‌ ಮೂಲಕ ಮತದಾನ ನಡೆದರೆ ಬಿಜೆಪಿ ಗೆಲ್ಲುವುದಿಲ್ಲ

ದಾವಣಗೆರೆಯ ಶಾಮನೂರು ಗ್ರಾಮದಲ್ಲಿ ಜೂನ್ 16, 1931ರಲ್ಲಿ ಶಾಮನೂರು ಶಿವಶಂಕರಪ್ಪ ಜನಿಸಿದರು. ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಮುಗಿಸಿದರು. DRM ಸೈನ್ಸ್ ಕಾಲೇಜಿನಲ್ಲಿ ವಿಜ್ಞಾನ ಪದವಿ ಪಡೆದು. ಅಕ್ಕಿ ವ್ಯಾಪಾರಕ್ಕೆ ಮುಂದಾದರು ಇದರೊಂದಿಗೆ ರಾಜಕೀಯಕ್ಕೆ ಕಾಲಿಟ್ಟರು.

ಪುರಸಭೆ ಸದಸ್ಯರಾಗಿ ರಾಜಕೀಯ ಆರಂಭ: 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ ಶಾಮನೂರು ಶಿವಶಂಕರಪ್ಪ ಅಲ್ಲಿಂದ ಹಿಂತಿರುಗಿ ನೋಡಲೇ ಇಲ್ಲ. ನಂತರ 1971ರಲ್ಲಿ ಪುರಸಭೆ ಅಧ್ಯಕ್ಷರಾದರು. ರಾಜ್ಯ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ, ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು.

ಆರು ಬಾರಿ ಶಾಸಕ: ಅಜಾತಶತ್ರು ಎಂದೇ ಗುರುತಿಸಿಕೊಂಡಿರುವ ಶಾಮನೂರು ಶಿವಶಂಕರಪ್ಪ ತಮ್ಮ 63ನೇ ವಯಸ್ಸಿನಲ್ಲಿ ಅಂದರೆ 1994ರಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರದಿಂದ‌ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ವಿಧಾನಸಭೆಯ ಮೆಟ್ಟಿಲು ಹತ್ತಿದರು. ಬಳಿಕ 2004ರಲ್ಲಿಯೂ ಗೆಲುವು ಸಾಧಿಸಿದರು. ನಂತರ ಕ್ಷೇತ್ರ ವಿಂಗಡಣೆಯಾದಾಗ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದಿಂದ ಇಲ್ಲಿಯವರೆಗೆ ಸತತ ನಾಲ್ಕು ಬಾರಿ ಜಯ ಸಾಧಿಸಿದ್ದಾರೆ.

ಪುರಸಭೆ ಸದಸ್ಯರಾಗಿ, ಅಧ್ಯಕ್ಷರಾಗಿ, ಶಾಸಕರಾಗಿ, ಸಚಿವರಾಗಿ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಅವರು ಸಮುದಾಯದ ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಮಹತ್ತರ ಸೇವೆ ಸಲ್ಲಿಸಿದ್ದರು.

Previous articleದೇವಸ್ಥಾನಕ್ಕೆ ತೆರಳುತ್ತಿದ್ದ ದಂಪತಿ ಬೈಕ್‌ಗೆ ಕಾರ್‌ ಡಿಕ್ಕಿ: ಪತ್ನಿ ಸಾವು