SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ವಿಫಲ: ಸಂಸದ ಯದುವೀರ್

ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ವಿಫಲ: ಸಂಸದ ಯದುವೀರ್

0
53

ದಾವಣಗೆರೆ: ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ನಿಭಾಯಿಸುವ ಜತೆಗೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರದ ಕೊರತೆಯ ಎದ್ದು ಕಾಣುತ್ತಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಳವಳ ವ್ಯಕ್ತಪಡಿಸಿದರು.

ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮೈಸೂರು ಮನೆತನದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ನೂತನ ಪುತ್ಥಳಿ ಅನಾವರಣ ಮಾಡುವ ಮೊದಲು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

​ರಾಜ್ಯದಲ್ಲಿ ಪ್ರತಿ 4-5 ವರ್ಷಗಳಿಗೊಮ್ಮೆ ಬರ ಪರಿಸ್ಥಿತಿ ಬರುತ್ತದೆ ಎಂಬುದು ತಿಳಿದಿದ್ದರೂ, ರಾಜ್ಯ ಸರ್ಕಾರ ಅದಕ್ಕೆ ತಕ್ಕಂತೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳದಿರುವುದು ಖಂಡನೀಯ. ಸರ್ಕಾರ ಬರ ಪರಿಹಾರವನ್ನು ಘೋಷಿಸಿ, ಕ್ರಮ ಕೈಗೊಂಡಿರುವುದು ಸ್ವಾಗತಾರ್ಹವಾದರೂ, ಬರ ಪರಿಸ್ಥಿತಿಯನ್ನು ಎದುರಿಸಲು ಶಾಶ್ವತ ಹಾಗೂ ದೀರ್ಘಕಾಲೀನ ಯೋಜನೆಗಳ ಅಗತ್ಯವಿದೆ ಎಂದರು.

​ಮುಂದಿನ ದಿನಗಳಲ್ಲಿ ಇಂತಹ ಬರ ಕ್ಷಾಮದಿಂದ ಜನರಿಗೆ ಹಾಗೂ ರೈತರಿಗೆ ತೊಂದರೆಯಾಗದಂತೆ ಸರ್ಕಾರ ಮುಂಚಿತವಾಗಿಯೇ ಅಗತ್ಯ ಸಿದ್ಧತೆ ಮತ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.