Home ನಮ್ಮ ಜಿಲ್ಲೆ ದಾವಣಗೆರೆ ದಾವಣಗೆರೆ: ಶಾಂತಿ ಕದಡಿದರೆ ನಿರ್ದಾಕ್ಷಿಣ್ಯ ಕ್ರಮ – ಎಸ್ಪಿ

ದಾವಣಗೆರೆ: ಶಾಂತಿ ಕದಡಿದರೆ ನಿರ್ದಾಕ್ಷಿಣ್ಯ ಕ್ರಮ – ಎಸ್ಪಿ

0

ದಾವಣಗೆರೆ: ಕಾರ್ಲ್ ಮಾರ್ಕ್ಸ್ ನಗರದಲ್ಲಿ ಫ್ಲೆಕ್ಸ್ ಅಳವಡಿಕೆ ವಿಚಾರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಉಭಯ ಕೋಮಿನ ಎಂಟು ಆರೋಪಿಗಳನ್ನು ಬಂಧಿಸಲಾಗಿದ್ದು, ಪರಿಸ್ಥಿತಿ ಶಾಂತವಾಗಿದೆ. ಯಾರಾದರೂ ಶಾಂತಿ ಕದಡಲು ಪ್ರಯತ್ನಿಸಿದರೆ ನಿರ್ದಾಕ್ಷ್ಯಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಸಿದ್ದಾರೆ.

ಶುಕ್ರವಾರ ರಾತ್ರಿ ವಿಡಿಯೋ ಮೂಲಕ ಸಂದೇಶ ರವಾನಿಸಿರುವ ಎಸ್ಪಿ, ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡುವುದು, ಪ್ರಚೋದನಾಕಾರಿ ಪೋಸ್ಟ್ ಮಾಡಿದರೆ ಹಾಗೂ ಸುಳ್ಳು ಸುದ್ದಿ ಹಬ್ಬಿಸುವುದು, ಜನರಿಗೆ ತಪ್ಪು ಮಾಹಿತಿ ನೀಡಿದರೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version