ದಾವಣಗೆರೆ: ಭದ್ರಾ ಬಲದಂಡೆ ನಾಲೆಯಲ್ಲಿ ಈಜಲು ತೆರಳಿದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರು ನೀರು ಪಾಲಾಗಿರುವ ಘಟನೆ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ದಾವಣಗೆರೆ ಬಿಇಐಟಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಾದ ವಿವೇಕ್, ಮಾನಸ ಎಂದು ಗುರುತಿಸಲಾಗಿದೆ. ವಿವೇಕ್ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರ ತೆಗೆದಿದ್ದು, ಮಾನಸ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ದಾವಣಗೆರೆ ಬಿಇಐಟಿ ಇಂಜಿನಿಯರಿಂಗ್ ಕಾಲೇಜಿನ 10 ವಿದ್ಯಾರ್ಥಿಗಳು ಮರಬನಹಳ್ಳಿ ಸಮೀಪದಲ್ಲಿರುವ ಭದ್ರಾ ಬಲದಂಡೆ ನಾಲೆಗೆ ತೆರಳಿದ್ದರು. ವಿವೇಕ್ ಮತ್ತು ಮಾನಸ ಇಬ್ಬರು ನೀರು ಪಾಲಾಗಿದ್ದಾರೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ, ವಿವೇಕ್ ಮೃತದೇಹ ಹೊರ ತೆಗೆದಿದ್ದಾರೆ. ಮಾನಸ ಮೃತದೇಹಕ್ಕಾಗಿ ಶೋಧ ಮುಂದುವರಿದಿದೆ. ಈ ಘಟನೆ ಕುರಿತು ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




















