ಈಜಲು ತೆರಳಿದ್ದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಬ್ಬರು ನೀರುಪಾಲು

ದಾವಣಗೆರೆ: ಭದ್ರಾ ಬಲದಂಡೆ ನಾಲೆಯಲ್ಲಿ ಈಜಲು ತೆರಳಿದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಬ್ಬರು ನೀರು ಪಾಲಾಗಿರುವ ಘಟನೆ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ. ದಾವಣಗೆರೆ ಬಿಇಐಟಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಾದ ವಿವೇಕ್, ಮಾನಸ ಎಂದು ಗುರುತಿಸಲಾಗಿದೆ. ವಿವೇಕ್ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರ ತೆಗೆದಿದ್ದು, ಮಾನಸ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ದಾವಣಗೆರೆ ಬಿಇಐಟಿ ಇಂಜಿನಿಯರಿಂಗ್ ಕಾಲೇಜಿನ 10 ವಿದ್ಯಾರ್ಥಿಗಳು ಮರಬನಹಳ್ಳಿ ಸಮೀಪದಲ್ಲಿರುವ ಭದ್ರಾ ಬಲದಂಡೆ ನಾಲೆಗೆ ತೆರಳಿದ್ದರು. ವಿವೇಕ್ ಮತ್ತು ಮಾನಸ ಇಬ್ಬರು ನೀರು … Continue reading ಈಜಲು ತೆರಳಿದ್ದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಬ್ಬರು ನೀರುಪಾಲು