ವಚನಾನಂದ ಶ್ರೀ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಿಕೆ

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಪದಚ್ಯುತ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಅವರಿಗೆ ಪೋಕ್ಸೊ ಪ್ರಕರಣದಲ್ಲಿ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಪೊಲೀಸರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜೂನ್ 3ಕ್ಕೆ ಮುಂದೂಡಿದೆ. ವಚನಾನಂದ ಸ್ವಾಮೀಜಿ ಪಡೆದಿರುವ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಸ್ವಾಮೀಜಿ ಪರ ವಕೀಲ ಎಸ್.ವಿ. ಪಾಟೀಲ ಅವರು ತಕರಾರು ಅರ್ಜಿ ಸಲ್ಲಿಸಿದ್ದರು. ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರು ಜೂನ್ 3ಕ್ಕೆ … Continue reading ವಚನಾನಂದ ಶ್ರೀ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಿಕೆ