Home Advertisement
Home ನಮ್ಮ ಜಿಲ್ಲೆ ದಾವಣಗೆರೆ ಕೆಲಸವಿಲ್ಲದವರ ಕೊಂಕು ಮಾತಿಗೆ ತಲೆಕೆಡಿಸಿಕೊಳ್ಳಲ್ಲ

ಕೆಲಸವಿಲ್ಲದವರ ಕೊಂಕು ಮಾತಿಗೆ ತಲೆಕೆಡಿಸಿಕೊಳ್ಳಲ್ಲ

0
78

ದಾವಣಗೆರೆ: ಪಕ್ಷದ ರಾಜ್ಯಾಧ್ಯಕ್ಷನಾಗಿರುವ ನನಗೆ ಸಾಕಷ್ಟು ಜವಾಬ್ದಾರಿಯಿದ್ದು, ಕಾಯಕವಿಲ್ಲದವನ ಕೊಂಕಿನ ಮಾತಿಗೆ ಕೊರಗುವುದೇಕೆ ಎಂಬ ಹಿರಿಯರ ಮಾತಿನಂತೆ ಕೆಲವರ ಬೇಜವಾಬ್ದಾರಿ ಹೇಳಿಕೆಗಳಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ದಕ್ಷಿಣದ ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಅನುಕೂಲವಾಗುವಂತಹ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ ಪ್ರತಿಕ್ರಿಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಘಟಕದ ಅಧ್ಯಕ್ಷನಾಗಿ ನನಗೆ ದೊಡ್ಡ ಜವಾಬ್ದಾರಿಯಿದೆ. ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ ಸಂಘಟನೆಯನ್ನು ಬಲಪಡಿಸುವತ್ತ ಗಮನ ಹರಿಸುತ್ತಿದ್ದೇನೆ ಹೊರತು, ಇಂತಹ ಆಧಾರರಹಿತ ಟೀಕೆಗಳಿಗೆ ಉತ್ತರಿಸುವ ಅವಶ್ಯಕತೆಯಿಲ್ಲ, ಕೆಲಸವಿಲ್ಲದವರ ಆರೋಪಕ್ಕೆ ಉತ್ತರಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.