ದಾವಣಗೆರೆ: ಬಹಳಷ್ಟು ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ಇಡೀ ಸಮಾಜಕ್ಕೆ ಆಘಾತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ದಾವಣಗೆರೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಾಮನೂರು ಮತ್ತು ನಮ್ಮ ಒಡನಾಟ ಬಹಳಷ್ಟು ಹಿಂದಿನದು. ಎಲ್ಲಾ ಸಂದರ್ಭಗಳಲ್ಲಿಯೂ ಸಹಕಾರ ನೀಡಿದ ಹಿರಿಯ ವ್ಯಕ್ತಿ ಅವರು. ಸಮಾಜಕ್ಕೆ ಅವರನ್ನು ಕಳೆದುಕೊಂಡಿರುವುದು ತುಂಬಲಾರದ ನಷ್ಟವಾಗಿದೆ ಎಂದರು.
ಇದನ್ನೂ ಓದಿ: ಸುಡುಬಿಸಿಲಲ್ಲೂ ಎಸ್ಸೆಸ್ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ
ಈಗಾಗಲೇ ನಮ್ಮ ಅವರ ಸಂಬಂಧದ ಬಗ್ಗೆ ಸಾಕಷ್ಟು ಬಾರಿ ಹೇಳಿದ್ದೇನೆ. ಅವರೊಬ್ಬ ಮುತ್ಸದ್ದಿ ರಾಜಕಾರಣಿ, ಅಜಾತ ಶತ್ರು. ರಾಜಕೀಯ ಮಾತ್ರವಲ್ಲದೇ ಶಿಕ್ಷಣ ಕ್ಷೇತ್ರದಲ್ಲೂ ಅಪಾರ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.





















