ಹುಬ್ಬಳ್ಳಿ ಬಳಿಕ ಅಮಿತ್ ಶಾ ಅವರ ಬೆಳಗಾವಿ ಕಾರ್ಯಕ್ರಮವೂ ರದ್ದು!

ಹುಬ್ಬಳ್ಳಿ: ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಯಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮದ ಬಳಿಕ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಗ್ರಾಮಕ್ಕೆ ತೆರಳುವ ಕಾರ್ಯಕ್ರಮವನ್ನೂ ರದ್ದುಪಡಿಸಿದ್ದಾರೆ. ಶುಕ್ರವಾರ ತಡರಾತ್ರಿ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ್ದ ಅಮಿತ್ ಶಾ ಅವರು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಬೆಳಗ್ಗೆ ಗಬ್ಬೂರು ಬೈಪಾಸ್‌ನಲ್ಲಿರುವ ಕೆಎಲ್‌ಇ ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯದ ನೂತನ ಶೈಕ್ಷಣಿಕ ಕಟ್ಟಡ … Continue reading ಹುಬ್ಬಳ್ಳಿ ಬಳಿಕ ಅಮಿತ್ ಶಾ ಅವರ ಬೆಳಗಾವಿ ಕಾರ್ಯಕ್ರಮವೂ ರದ್ದು!