ಹುಬ್ಬಳ್ಳಿ: ನವಲಗುಂದ ತಾಲೂಕಿನ ಶಿರೂರು ಗ್ರಾಮದಲ್ಲಿರುವ ಎಸ್‌ಬಿಐ ಬ್ಯಾಂಕ್ ಶಾಖೆಯ ಗೋಡೆ ಒಡೆದು ದರೋಡೆ ಮಾಡಲು ಯತ್ನಿಸಿದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಅಪರಿಚಿತ ಖದೀಮರು ಬ್ಯಾಂಕ್ ಶಾಖೆಯ ಹಿಂಬದಿ ಗೋಡೆಯನ್ನು ಒಡೆದು ಒಳನುಗ್ಗಿ ಹಣ ದೋಚುವ ಸಂಚು ರೂಪಿಸಿದ್ದರು. ಗೋಡೆ ಅಗೆಯುವ ವೇಳೆ ಬ್ಯಾಂಕ್‌ನ ಸೈರನ್ ಶಬ್ದ ಕೇಳಿಬಂದ ಕಾರಣ, ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: 2026ಕ್ಕೆ ಸಂಯುಕ್ತ ಕರ್ನಾಟಕದ 26 ಅಜೆಂಡಾ
ಮಂಗಳವಾರ ಬೆಳಗ್ಗೆ ಬ್ಯಾಂಕ್ ಸಿಬ್ಬಂದಿ ಎಂದಿನಂತೆ ಕೆಲಸಕ್ಕೆ ಹಾಜರಾದಾಗ ಗೋಡೆ ಒಡೆದು ಕಳ್ಳತನಕ್ಕೆ ಯತ್ನಿಸಿರುವುದು ಪತ್ತೆಯಾಗಿದೆ. ಮಾಹಿತಿ ಪಡೆದ ನವಲಗುಂದ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.























