ಹುಬ್ಬಳ್ಳಿ: ಸಂಕ್ರಾಂತಿ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂಬ ಮಾಹಿತಿ ಬಂದಿದೆ. ಸಚಿವ ಸಂಪುಟ ವಿಸ್ತರಣೆಯಾದಲ್ಲಿ ಶೇ. 50ರಷ್ಟು ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಕೂಗು ಕೇಳಿ ಬಂದಿದೆ. ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ನನಗೂ ಸಚಿವ ಸ್ಥಾನ ದೊರೆಯುವ ವಿಶ್ವಾಸವಿದೆ. ಪಕ್ಷದ ಹಾಗೂ ವರಿಷ್ಠರ ಅಂತಿಮ ತೀರ್ಮಾನ ಕಾದು ನೋಡಬೇಕಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ಹುಬ್ಬಳ್ಳಿಯಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಗಿಲು ಬಡಾವಣೆ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ಯಾವುದೇ ರೀತಿ ತುಷ್ಟಿಕರಣ ಮಾಡಿಲ್ಲ. ಬದಲಿಗೆ ಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದೆ. ಈ ವಿಷಯದಲ್ಲಿ ಬಿಜೆಪಿಯವರು ಅಲ್ಪಸಂಖ್ಯಾತರು, ಬಹುಸಂಖ್ಯಾತರು ಎಂದು ಹೇಳುತ್ತ ರಾಜಕಾರಣ ಮಾಡುತ್ತಿದ್ದಾರೆ ಎಂದರು.
ಇದನ್ನೂ ಓದಿ: 2026ಕ್ಕೆ ಸಂಯುಕ್ತ ಕರ್ನಾಟಕದ 26 ಅಜೆಂಡಾ
ಶಕ್ತಿ ಯೋಜನೆಯಲ್ಲಿ ಒಂದಾಗ ಗೃಹಲಕ್ಷ್ಮೀ ಹಣ ನೀಡುವಲ್ಲಿ ತಡವಾಗಿರಬಹುದು. ಆದರೆ, ಯಾವುದೇ ಅವ್ಯವಹಾರವಾಗಿಲ್ಲ. ಅಧಿಕಾರಿಗಳು ನೀಡಿದ ತಪ್ಪು ಮಾಹಿತಿಯಿಂದಾಗಿ ಐದು ಸಾವಿರ ಕೋಟಿ ಅವ್ಯವಹಾರವಾಗಿದೆ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದಾರೆ. ಅಭಿವೃದ್ಧಿ ಸಹಿಸಲಾಗದ ಬಿಜೆಪಿಯವರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿಯವರಿಗೆ ಅಷ್ಟು ನೈತಿಕತೆ ಹಾಗೂ ಧೈರ್ಯ ಇದ್ದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ ಎಂದು ಹೇಳಲಿ ಎಂದು ಸವಾಲೆಸೆದರು.






















