ಹುಬ್ಬಳ್ಳಿ: ಮನರೇಗಾ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಲಕ್ಷಾಂತರ ಕೋಟಿ ರೂ. ಲೂಟಿ ಮಾಡಲಾಗಿದೆ. ಇದರಿಂದ ಬಡ ಕೂಲಿ ಕಾರ್ಮಿಕರಿಗೆ ಅನ್ಯಾಯವಾಗಿದ್ದು, ನಕಲಿ ಬಿಲ್, ಹಣದ ಸೋರಿಕೆಯನ್ನು ತಡೆಯಲು ಹಾಗೂ ನಕಲಿ ಜಾಬ್ ಕಾರ್ಡುಗಳನ್ನು ಪತ್ತೆ ಹಚ್ಚಲು ವಿಬಿ-ಜಿ ರಾಮ್ ಜಿ' (ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ)’ ಸಹಕಾರಿಯಾಗಲಿದೆ ಎಂದು ಕೇಂದ್ರದ ಎಂಎಸ್‌ಎಂಇ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಆದರೆ, ಯೋಜನೆ ಸ್ಥಗಿತವಾಗಿಲ್ಲ. ಈ ಯೋಜನೆಯಲ್ಲಿ ನಡೆದಿದ್ದ ಅಕ್ರಮಗಳನ್ನು ನರೇಂದ್ರ ಮೋದಿ ಸರ್ಕಾರ ಸರಿಪಡಿಸಿ ಅದರಲ್ಲಿ ಅನೇಕ ಮಹತ್ವದ ಸುಧಾರಣೆಗಳನ್ನು ತಂದಿದೆ ಎಂಬುವುದನ್ನು ಕಾಂಗ್ರೆಸ್ ನಾಯಕರು ಅರಿತುಕೊಳ್ಳಬೇಕಿದೆ ಎಂದರು.
ಇದನ್ನೂ ಓದಿ: ಯಡಿಯೂರಪ್ಪ ಸಿಎಂ ಇದ್ದಾಗಲೇ ಬೇಡ್ತಿ – ವರದಾ ನದಿ ಯೋಜನೆ ಸಿದ್ಧ
2005 ರಲ್ಲಿ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಇಲ್ಲದ ಜನರಿಗೆ ಉದ್ಯೋಗ ಕೊಡುವ ಕೆಲಸ ಆರಂಭಿಸಲಾಯಿತು. 2005 ರಿಂದ 2025ರ ವರೆಗೆ ಯೋಜನೆಗೆ 10.67 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇವೆ. ಆದರೆ, 10.5 ಲಕ್ಷ ಅವ್ಯವಹಾರ ಪ್ರಕರಣಗಳು ದಾಖಲಾಗಿರುವುದು ಬೇಸರದ ಸಂಗತಿ ಎಂದರು.























