ಧಾರವಾಡ ಆಕಾಶವಾಣಿ ಪ್ರಾದೇಶಿಕ ಸುದ್ದಿ ವಿಭಾಗ ಸ್ಥಳಾಂತರಕ್ಕೆ ಬ್ರೇಕ್

ಧಾರವಾಡ: ಉತ್ತರ ಕರ್ನಾಟಕದ ಜನರ ಭಾವನೆಯನ್ನು ಪ್ರತಿಬಿಂಬಿಸುವ ಮಹತ್ವದ ಬೆಳವಣಿಗೆಯಲ್ಲಿ, ಧಾರವಾಡದಲ್ಲಿರುವ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಈ ಮೂಲಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸಲು ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ವಿಷಯದ ಬಗ್ಗೆ ಸ್ಥಳೀಯ ಜನರು ಹಾಗೂ ವಿವಿಧ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಧಾರವಾಡದ ಈ ಪ್ರಸಾರ ಕೇಂದ್ರವು ಉತ್ತರ ಕರ್ನಾಟಕದ ಸಂಸ್ಕೃತಿ, ಭಾಷೆ ಮತ್ತು ಸ್ಥಳೀಯ ವಿಷಯಗಳಿಗೆ ಪ್ರಮುಖ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ, ಸ್ಥಳಾಂತರಕ್ಕೆ ವಿರೋಧ ಹೆಚ್ಚಾಗಿತ್ತು. … Continue reading ಧಾರವಾಡ ಆಕಾಶವಾಣಿ ಪ್ರಾದೇಶಿಕ ಸುದ್ದಿ ವಿಭಾಗ ಸ್ಥಳಾಂತರಕ್ಕೆ ಬ್ರೇಕ್