SK Home Ad
Home ನಮ್ಮ ಜಿಲ್ಲೆ ಧಾರವಾಡ ಧಾರವಾಡ ಪಾಲಿಕೆ ಹೋರಾಟ: 12 ಕೈ ಸದಸ್ಯರ ರಾಜೀನಾಮೆ

ಧಾರವಾಡ ಪಾಲಿಕೆ ಹೋರಾಟ: 12 ಕೈ ಸದಸ್ಯರ ರಾಜೀನಾಮೆ

0
2

ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ 10ನೇ ದಿನಕ್ಕೆ ಕಾಲಿಟ್ಟಿದ್ದು, ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರವಿವಾರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 12 ಕಾಂಗ್ರೆಸ್ ಸದಸ್ಯರು ಪಾಲಿಕೆ ಸದಸ್ಯತ್ವ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಧುಮುಕಿದ್ದಾರೆ. ಇದರಿಂದಾಗಿ ಹೋರಾಟ ಮತ್ತಷ್ಟು ತೀವ್ರತೆ ಪಡೆದುಕೊಂಡಿದೆ.

ಬಿ.ಡಿ. ಹಿರೇಮಠ ಅವರನ್ನು ಹೊರತುಪಡಿಸಿ ಹೋರಾಟ ನಡೆಸುತ್ತಿರುವವರೆಲ್ಲರೂ ಕಾಂಗ್ರೆಸ್ ಪಕ್ಷದವರು ಎಂದು ಬಿಜೆಪಿ ಮುಖಂಡರು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಸಲಾಗುತ್ತಿದೆ ಎಂಬುದನ್ನು ನಿರೂಪಿಸಲು ಕಾಂಗ್ರೆಸ್‌ನ 12 ಪಾಲಿಕೆ ಸದಸ್ಯರು ರಾಜಿನಾಮೆ ಪತ್ರವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ನೀಡಿದರು.

ಹೋರಾಟದ ಭಾಗವಾಗಿ ವಾರ್ಡ್ 7ರ ನಾಗರಿಕರು ಗಾಂಧಿಚೌಕದಿಂದ ಕಲಾಭವನದವರೆಗೆ ಚಕ್ಕಡಿಗಳೊಂದಿಗೆ ಮೆರವಣಿಗೆ ನಡೆಸಿದರು. ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಪ್ರತ್ಯೇಕ ಪಾಲಿಕೆ ಹೋರಾಟಕ್ಕೆ ಬೆಂಬಲ ನೀಡಿದರು.